ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ. ನ.24: ನಗರದ ವಿವಿಧೆಡೆ ಇರುವ ಸಾರ್ವಜನಿಕ ಶೌಚಾಲಯಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಶುಕ್ರವಾರ ಭೇಟಿ ನೀಡಿ ಸ್ವಚ್ಛತೆ ಹಾಗೂ ಮೂಲಸೌಲಭ್ಯಗಳ ಪರಿಶೀಲನೆ ನಡೆಸಿದರು.
ನಗರದ ಸಂತೆಹೊಂಡದ ಸಮೀಪ, ಖಾಸಗಿ ಬಸ್‍ನಿಲ್ದಾಣದ ಬಳಿ ಇರುವ ಸಾರ್ವಜನಿಕ ಶೌಚಾಲಯಗಳಿಗೆ ಧಿಡೀರ್ ಭೇಟಿ ನೀಡಿ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲಿಸಿದರು.
ನಗರಸಭೆಯ ಸಾರ್ವಜನಿಕ ಶೌಚಾಲಯಗಳು ಶುಚಿತ್ವವಿಲ್ಲದೇ ದುರ್ವಾಸನೆ ಬರುತ್ತಿದ್ದು ಮತ್ತು ಸರಿಯಾದ ನಿರ್ವಹಣೆ ಇಲ್ಲದೇ ಇರುವುದು ಕಂಡುಬಂದಿದ್ದರಿಂದ ಅಸಮಾಧಾನ ವ್ಯಕ್ತಪಡಿಸಿದ ಅವರು, ಶೌಚಾಲಯ ಶುಚಿತ್ವ ಹಾಗೂ ನಿರ್ವಹಣೆಯನ್ನು ಕಾಪಾಡಲು ನಗರಸಭೆಯು ವಿಫಲವಾಗಿರುತ್ತದೆ ಹಾಗೂ ಇದರ ಜವಾಬ್ದಾರಿಯನ್ನು ಹೊಂದಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿದರೂ ಸಹ ಕರೆ ಸ್ವೀಕರಿಸಿರುವುದಿಲ್ಲ ಎಂಬುದಾಗಿ ಬೇಸರಪಟ್ಟರು.
ಒಟ್ಟಾರೆ ನಗರದ ಸಾರ್ವಜನಿಕ ಶೌಚಾಲಯಗಳ ದುಸ್ಥಿತಿಯ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಅಸಮಾಧಾನ ವ್ಯಕ್ತಪಡಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್