ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ ಫೆ. 19 : ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಸೂಚನೆಯಂತೆ ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಗಣಕೀಕರಣಗೊಳಿಸಿರುವ ಮತ್ತು ಇದುವರೆವಿಗೂ ಇ-ಆಸ್ತಿ ನಮೂನೆ-3 ಅನ್ನು ಪಡೆಯದಿರುವ ಸ್ವತ್ತುಗಳಿಗೆ ಸಂಬಂಧಪಟ್ಟಂತೆ “ಬಿ”-ಖಾತೆ ನೀಡಲಾಗುತ್ತಿದ್ದು, ಸಂಬಂಧಪಟ್ಟವರು ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
“ಬಿ” ರಿಜಿಸ್ಟರ್ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ಪಡೆಯಲು ನೀಡಬೇಕಾದ ದಾಖಲೆಗಳ ವಿವರ ಇಂತಿದೆ. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ 2024 ರ ಸೆಪ್ಟಂಬರ್ 10 ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರ ಅಥವಾ ಕ್ರಯ ಪತ್ರ ಅಥವಾ ವಿಭಾಗ ಪತ್ರ ಅಥವಾ ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ (ನಮೂನೆ-15 ಇ.ಸಿ), ಚಾಲ್ತಿ ಸಾಲಿನ ಆಸ್ತಿ ತೆರಿಗೆ ಮತ್ತು ಪಾವತಿ ರಸೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿ (ಮತದಾರರ ಗುರುತಿನ ಚೀಟಿ/ ಪಾನ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ಪಡಿತರ ಚೀಟಿ/ ಪಾಸ್ಪೋರ್ಟ್.
ಈ ದಾಖಲೆಗಳನ್ನು ಚಿತ್ರದುರ್ಗ ನಗರಸಭೆಗೆ ಸಲ್ಲಿಸಿ “ಬಿ” ಖಾತಾ ಪಡೆಯಲು ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರುಗಳಿಗೆ ಸೂಚನೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ, ವಾಟ್ಸಾಪ್ ನಂ. 9606281164 ಅಥವಾ ಕಚೇರಿ ವೇಳೆಯಲ್ಲಿ ಕಂದಾಯ ವಿಭಾಗದ ಕರವಸೂಲಿಗಾರರು, ಕಂದಾಯ ನಿರೀಕ್ಷಕರು, ಕಂದಾಯಾಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ಎಂ. ರೇಣುಕಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್