Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಬಿ-ಖಾತಾ ಪಡೆಯಲು ನಗರಸಭೆ ಸೂಚನೆ

---Advertisement---

ಚಿತ್ರದುರ್ಗ ಫೆ. 19 : ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಸೂಚನೆಯಂತೆ ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಗಣಕೀಕರಣಗೊಳಿಸಿರುವ ಮತ್ತು ಇದುವರೆವಿಗೂ ಇ-ಆಸ್ತಿ ನಮೂನೆ-3 ಅನ್ನು ಪಡೆಯದಿರುವ ಸ್ವತ್ತುಗಳಿಗೆ ಸಂಬಂಧಪಟ್ಟಂತೆ “ಬಿ”-ಖಾತೆ ನೀಡಲಾಗುತ್ತಿದ್ದು, ಸಂಬಂಧಪಟ್ಟವರು ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

 

“ಬಿ” ರಿಜಿಸ್ಟರ್‍ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ಪಡೆಯಲು ನೀಡಬೇಕಾದ ದಾಖಲೆಗಳ ವಿವರ ಇಂತಿದೆ.  ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ 2024 ರ ಸೆಪ್ಟಂಬರ್ 10 ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರ ಅಥವಾ ಕ್ರಯ ಪತ್ರ ಅಥವಾ ವಿಭಾಗ ಪತ್ರ ಅಥವಾ ಹಕ್ಕು ಖುಲಾಸೆ ಪತ್ರಗಳು.  ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ (ನಮೂನೆ-15 ಇ.ಸಿ), ಚಾಲ್ತಿ ಸಾಲಿನ ಆಸ್ತಿ ತೆರಿಗೆ ಮತ್ತು ಪಾವತಿ ರಸೀದಿ.  ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ,  ಮಾಲೀಕರ ಗುರುತಿನ ದಾಖಲೆ ಪ್ರತಿ (ಮತದಾರರ ಗುರುತಿನ ಚೀಟಿ/ ಪಾನ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ಪಡಿತರ ಚೀಟಿ/  ಪಾಸ್‍ಪೋರ್ಟ್.
ಈ ದಾಖಲೆಗಳನ್ನು ಚಿತ್ರದುರ್ಗ ನಗರಸಭೆಗೆ ಸಲ್ಲಿಸಿ “ಬಿ” ಖಾತಾ ಪಡೆಯಲು ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರುಗಳಿಗೆ ಸೂಚನೆ ನೀಡಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ, ವಾಟ್ಸಾಪ್ ನಂ. 9606281164 ಅಥವಾ ಕಚೇರಿ ವೇಳೆಯಲ್ಲಿ ಕಂದಾಯ ವಿಭಾಗದ ಕರವಸೂಲಿಗಾರರು, ಕಂದಾಯ ನಿರೀಕ್ಷಕರು, ಕಂದಾಯಾಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ಎಂ. ರೇಣುಕಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!

Leave a Comment