Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 26 ರಂದು ಚಿತ್ರದುರ್ಗ ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನದ ಚುನಾವಣೆ : ಇಬ್ಬರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಆಗಸ್ಟ್ 26 ರಂದು ನಡೆಯಲಿರುವ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಕೆರಳಿಸಿರುವುದರ ನಡುವೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನಗರಸಭೆ 29 ನೇ ವಾರ್ಡ್‍ನ ಸದಸ್ಯೆ ಸುಮಿತಾ ರಾಘವೇಂದ್ರ, 24 ನೇ ವಾರ್ಡ್ ಸದಸ್ಯ ದಾವೂದ್ ಇವರುಗಳಿಗೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಕಾಂಗ್ರೆಸ್ ಭಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡುತ್ತ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿರುವ ನೀವುಗಳು ಇನ್ನು ಮುಂದೆ ಕಾಂಗ್ರೆಸ್ ಕುಟುಂಬದಲ್ಲಿ ಮುಂದುವರೆಯಿರಿ ನಗರಸಭೆಯಲ್ಲಿ ಮುಂದೆ ಅಧಿಕಾರ ಸಿಗಲಿ ಎಂದು ಹಾರೈಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ನಗರಸಭೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್‍ಗೆ ಸಿಗಬೇಕೆಂಬುದು ನಮ್ಮೆಲ್ಲರ ಆಸೆ. ಕಾಂಗ್ರೆಸ್‍ನಿಂದ ಮಾತ್ರ ಎಲ್ಲಾ ಜಾತಿ ಧರ್ಮದವರಿಗೂ ಸಾಮಾಜಿಕ

ನ್ಯಾಯ ನೀಡಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಕೆ.ಡಿ.ಪಿ. ಸದಸ್ಯ ಕೆ.ಸಿ.ನಾಗರಾಜ್, ಕಾಂಗ್ರೆಸ್ ಪರಿಶಿಷ್ಟ ವರ್ಗ ವಿಭಾಗದ ಅಧ್ಯಕ್ಷ ಮಂಜುನಾಥ್, ಸೈಯದ್ ಖುದ್ದೂಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಯು.ಲಕ್ಷ್ಮಿಕಾಂತ್, ಹನೀಸ್, ಪರಮೇಶ್, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ಡಾ.ರಹಮತ್‍ವುಲ್ಲಾ, ಪ್ರಕಾಶ್ ರಾಮನಾಯ್ಕ, ಜಿ.ವಿ.ಮಧುಗೌಡ, ಕರಿಯಪ್ಪ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಚೇರ್ಮನ್ ಡಾ.ಕೆ.ಅನ್ವರ್‍ಭಾಷಾ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಎಂ.ಸಿ.ಓ. ಬಾಬು ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...