ಚಿತ್ರದುರ್ಗ. ಜುಲೈ. 25: ಚಿತ್ರದುರ್ಗ ನಗರಸಭೆಯಲ್ಲಿ ತೆರವಾದ ಉಪಾಧ್ಯಕ್ಷರ ಸ್ಥಾನಕ್ಕೆ ಇದೇ ಜುಲೈ 28ರಂದು ಬೆಳಿಗ್ಗೆ 11ಕ್ಕೆ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.
ಚುನಾವಣಾಧಿಕಾರಿ ಹಾಗೂ ಚಿತ್ರದುರ್ಗ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಗರಸಭೆ ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ.
ಜುಲೈ 29ರಂದು ಬೆಳಿಗ್ಗೆ 11ಕ್ಕೆ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ “ಕೌನ್ಸಿಲ್ ಸಾಮಾನ್ಯ ಸಭೆ” ಆಯೋಜಿಸಲಾಗಿದೆ. ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್. ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















