ಸುದ್ದಿಒನ್, ಚಿತ್ರದುರ್ಗ, ನವೆಂಬರ್.15 : ತೀವ್ರ ಕುತೂಹಲ ಮೂಡಿಸಿದ್ದ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಇಂದು (ನವಂಬರ್.15) ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆ ಮಾಡುವಂತೆ ಆದೇಶಿಸಿದೆ.
ಆದರೆ ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನ.16 ಕ್ಕೆ ಮುಂದೂಡಿದೆ.
ಮೊದಲ ಪ್ರಕರಣದಲ್ಲಿ ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ವಿಚಾರವಾಗಿ ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ಪರಿಶೀಲಿಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದಾರೆ. ಈ ಆದೇಶ ಪ್ರತಿ ಸಂಜೆ ವೇಳೆಗೆ ಕಾರಾಗೃಹ ತಲುಪಿದರೆ ಇಂದೇ (ಬುಧವಾರವೇ) ಬಿಡುಗಡೆ ಆಗಲಿದ್ದಾರೆ
ಎಂದು ಶರಣರ ಪರ ವಕೀಲ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















