Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ವಿರೋಧಿಸಿ ಮುಸ್ಲಿಂರ ಮೌನ ಪ್ರತಿಭಟನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 04 : ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿರುವುದನ್ನು ವಿರೋಧಿಸಿ ಇಲ್ಲಿನ ದರ್ಜಿ ಕಾಲೋನಿಯಲ್ಲಿರುವ ಮಸ್ಜಿದೆ ಗೌಸಿಯಾ ಆಜಾಮ್ ಮಸೀದಿ ಮುಂದೆ ಶುಕ್ರವಾರ ತೋಳಿಗೆ ಕಪ್ಪು ಪಟ್ಟಿ ಧರಿಸಿದ ನೂರಾರು ಮುಸ್ಲಿಂರು ಕೇಂದ್ರ ಸರ್ಕಾರದ ವಿರುದ್ದ ಮೌನ ಪ್ರತಿಭಟನೆ ನಡೆಸಿದರು.

ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಜಮಾಯಿಸಿದ ಮುಸ್ಲಿಂರು ವಕ್ಫ್ ತಿದ್ದುಪಡಿ ಮಸೂದೆಯ ಮೂಲಕ ಮುಸಲ್ಮಾನರ ಹಕ್ಕುಗಳನ್ನು ಮೊಟಕುಗೊಳಿಸುವ ಹುನ್ನಾರ ನಡೆಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದರು.

ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಚೇರ್ಮನ್ ಎಂ.ಸಿ.ಓ.ಬಾಬು ಮಾತನಾಡಿ ಉಭಯ ಸದನಗಳಲ್ಲಿ ಅಂಗೀಕರಿಸುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಕೂಡಲೆ ಹಿಂದಕ್ಕೆ ಪಡೆಯಬೇಕು. ವಕ್ಫ್ ಬೋರ್ಡ್ ಕಮಿಟಿಗಳಲ್ಲಿ ಹಿಂದುಗಳನ್ನು ಸೇರಿಸುವುದು. ವಕ್ಫ್ ಮಂಡಳಿ ಅಧಿಕಾರವನ್ನು ಸಂಪೂರ್ಣವಾಗಿ ಜಿಲ್ಲಾಧಿಕಾರಿಗೆ ವಹಿಸುವುದು ಸೇರಿದಂತೆ ಇನ್ನು ಅನೇಕ ಕಾಯಿದೆಗಳನ್ನು ಜಾರಿಗೆ ತರುವ ಉದ್ದೇಶವಿಟ್ಟುಕೊಂಡು ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿದೆ. ಹಳೆಯ ಕಾಯಿದೆಯಲ್ಲಿದ್ದ ಕೆಲವು ಅಂಶಗಳನ್ನು ತಿದ್ದುಪಡಿ ವಿಧೇಯಕದಲ್ಲಿ ತೆಗೆದು ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಲಂ ಬೋರ್ಡ್‍ನ ರಶೀದ್, ನಗರಸಭೆ ಮಾಜಿ ಸದಸ್ಯ ಮುತುವಲ್ಲಿ ಸೈಯದ್ ಅಶ್ವಾಖ್ ಅಹಮದ್, ದಾವೂದ್, ಇಸ್ಮಾಯಿಲ್, ಸೈಪುಲ್ಲಾ ಇನ್ನು ಅನೇಕರು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಗರದ ಎಲ್ಲಾ ಮಸೀದಿಗಳ ಮುಂಭಾಗವೂ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ನಡೆದವು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment