ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ತಾಜಾ ಹಾಗೂ ಗುಣಮಟ್ಟದ ನಂದಿನಿ ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುವುದು ಶಿಮುಲ್ ಉದ್ದೇಶ ಎಂದು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಉದ್ದೇಶ ಎಂದು ನಿರ್ದೇಶಕ ಜಿ.ಬಿ.ಶೇಖರ್ ತಿಳಿಸಿದರು.
ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತ ಹಾಗೂ ಕೆಳಗೋಟೆಯಲ್ಲಿ ನಂದಿನಿ ಪ್ರಾಂಚೆಸ್ಸಿ ಮಿಲ್ಕ್ ಪಾರ್ಲರ್ಗಳನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.
ಶಿಮುಲ್ನಿಂದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ತುಪ್ಪ, ನೂರ ಐವತ್ತಕ್ಕೂ ಹೆಚ್ಚು ಬಗೆಯ ಸಿಹಿ ತಿನಿಸುಗಳು ದೊರೆಯುತ್ತದೆ. ಮುಂದಿನ ದಿನಗಳಲ್ಲಿ ಇಲ್ಲಿ ಇಡ್ಲಿ ದೋಸೆ ಹಿಟ್ಟು ಕೂಡ ಲಭ್ಯವಾಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬಹುದೆಂದು ವಿನಂತಿಸಿದರು.
ಶಿಮುಲ್ನ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಮಾತನಾಡಿ ಗ್ರಾಮೀಣ ಭಾಗಗಳಲ್ಲಿ ಸಹಕಾರ ಸಂಘಗಳ ಮೂಲಕ ರೈತರಿಂದ ಹಾಲು ಸಂಗ್ರಹಿಸಿ ವೈಜ್ಞಾನಿಕವಾಗಿ ಸಂಸ್ಕರಿಸಿ ಉತ್ತಮ ಗುಣಮಟ್ಟದ ನಂದಿನಿ ಉತ್ಪನ್ನಗಳನ್ನು ತಯಾರಿಸಲಾಗುವುದು. ಬಾಯಲ್ಲಿ ನೀರೂರಿಸುವ ಪೇಡ, ಬ್ರೆಡ್, ಬನ್ಸ್, ಐಸ್ಕ್ರೀಂ, ಪನ್ನೀರ್, ಕೋವ, ಹೀಗೆ ನೂರಕ್ಕೂ ಹೆಚ್ಚು ಬಗೆಯ ತಿನಿಸುಗಳು ಲಭ್ಯವಿದೆ. ನಂದಿನ ಪ್ರಾಂಚೆಸ್ಸಿ ಪಾರ್ಲರ್ಗಳಲ್ಲಿ ತಾಜಾ ಉತ್ಪನ್ನಗಳು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಲಭ್ಯವಾಗಲಿ ಎನ್ನುವುದು ಶಿಮುಲ್ ಉದ್ದೇಶ ಎಂದು ಹೇಳಿದರು.
ಶಿಮುಲ್ ನಿರ್ದೇಶಕ ಜಿ.ಪಿ.ರೇವಣಸಿದ್ದಪ್ಪ, ಚಿತ್ರದುರ್ಗ ಮಾರ್ಕೆಟಿಂಗ್ ಉಸ್ತುವಾರಿ ಅಧಿಕಾರಿ ಹನುಮಂತಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಆರ್.ಮಂಜುನಾಥ್, ನಂದಿನಿ ಪಾರ್ಲರ್ ಮಾಲೀಕ ಆರ್.ವೆಂಕಟೇಶ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.