Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕನಕ ವೃತ್ತದಲ್ಲಿ ಉದ್ಘಾಟನೆತಾದ ನಂದಿನಿ ಪ್ರಾಂಚೆಸ್ಸಿ ಮಿಲ್ಕ್ ಪಾರ್ಲರ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ತಾಜಾ ಹಾಗೂ ಗುಣಮಟ್ಟದ ನಂದಿನಿ ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುವುದು ಶಿಮುಲ್ ಉದ್ದೇಶ ಎಂದು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಉದ್ದೇಶ ಎಂದು ನಿರ್ದೇಶಕ ಜಿ.ಬಿ.ಶೇಖರ್ ತಿಳಿಸಿದರು.
ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತ ಹಾಗೂ ಕೆಳಗೋಟೆಯಲ್ಲಿ ನಂದಿನಿ ಪ್ರಾಂಚೆಸ್ಸಿ ಮಿಲ್ಕ್ ಪಾರ್ಲರ್‍ಗಳನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಶಿಮುಲ್‍ನಿಂದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ತುಪ್ಪ, ನೂರ ಐವತ್ತಕ್ಕೂ ಹೆಚ್ಚು ಬಗೆಯ ಸಿಹಿ ತಿನಿಸುಗಳು ದೊರೆಯುತ್ತದೆ. ಮುಂದಿನ ದಿನಗಳಲ್ಲಿ ಇಲ್ಲಿ ಇಡ್ಲಿ ದೋಸೆ ಹಿಟ್ಟು ಕೂಡ ಲಭ್ಯವಾಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬಹುದೆಂದು ವಿನಂತಿಸಿದರು.
ಶಿಮುಲ್‍ನ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಮಾತನಾಡಿ ಗ್ರಾಮೀಣ ಭಾಗಗಳಲ್ಲಿ ಸಹಕಾರ ಸಂಘಗಳ ಮೂಲಕ ರೈತರಿಂದ ಹಾಲು ಸಂಗ್ರಹಿಸಿ ವೈಜ್ಞಾನಿಕವಾಗಿ ಸಂಸ್ಕರಿಸಿ ಉತ್ತಮ ಗುಣಮಟ್ಟದ ನಂದಿನಿ ಉತ್ಪನ್ನಗಳನ್ನು ತಯಾರಿಸಲಾಗುವುದು. ಬಾಯಲ್ಲಿ ನೀರೂರಿಸುವ ಪೇಡ, ಬ್ರೆಡ್, ಬನ್ಸ್, ಐಸ್‍ಕ್ರೀಂ, ಪನ್ನೀರ್, ಕೋವ, ಹೀಗೆ ನೂರಕ್ಕೂ ಹೆಚ್ಚು ಬಗೆಯ ತಿನಿಸುಗಳು ಲಭ್ಯವಿದೆ. ನಂದಿನ ಪ್ರಾಂಚೆಸ್ಸಿ ಪಾರ್ಲರ್‍ಗಳಲ್ಲಿ ತಾಜಾ ಉತ್ಪನ್ನಗಳು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಲಭ್ಯವಾಗಲಿ ಎನ್ನುವುದು ಶಿಮುಲ್ ಉದ್ದೇಶ ಎಂದು ಹೇಳಿದರು.

ಶಿಮುಲ್ ನಿರ್ದೇಶಕ ಜಿ.ಪಿ.ರೇವಣಸಿದ್ದಪ್ಪ, ಚಿತ್ರದುರ್ಗ ಮಾರ್ಕೆಟಿಂಗ್ ಉಸ್ತುವಾರಿ ಅಧಿಕಾರಿ ಹನುಮಂತಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಆರ್.ಮಂಜುನಾಥ್, ನಂದಿನಿ ಪಾರ್ಲರ್ ಮಾಲೀಕ ಆರ್.ವೆಂಕಟೇಶ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment