Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನ.14 ರಿಂದ 20 ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ

---Advertisement---

 

ಚಿತ್ರದುರ್ಗ. ನ.13  ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯದಲ್ಲಿ ಇದೇ ನವೆಂಬರ್ 14 ರಿಂದ 20 ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸುತ್ತಿದ್ದು, ಇದರ ಅಂಗವಾಗಿ ನವೆಂಬರ್ 17 ಮತ್ತು 19 ರಂದು ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಮಾತ್ರ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ.

ಪ್ರತಿ ಶಾಲಾ ಹಾಗೂ ಕಾಲೇಜುಗಳಿಂದ ಇಬ್ಬರು ವಿದ್ಯಾರ್ಥಿಗಳಂತೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈಗಾಗಲೇ ಪತ್ರ ರವಾನಿಸಲಾಗಿದೆ ಹಾಗೂ ಶಾಲಾ ಕಾಲೇಜುಗಳಿಗೆ ಗ್ರಂಥಾಲಯದಿಂದಲೇ ಮುದ್ದಾಂ ಆಗಿ ಪತ್ರ ನೀಡಲಾಗಿದೆ. ಒಂದು ವೇಳೆ ತಲುಪದಿದ್ದಲ್ಲಿ ಶಾಲಾ ಮುಖ್ಯೋಪಾಧ್ಯಾರು ಹಾಗೂ ಪ್ರಾಂಶುಪಾಲರು ಶಾಲಾ-ಕಾಲೇಜುಗಳಿಂದ ಇಬ್ಬರು ವಿದ್ಯಾರ್ಥಿಗಳನ್ನು ನವಂಬರ್ 16 ರಂದು  ಸಂಜೆ 5 ಗಂಟೆಯೊಳಗಾಗಿ ನಗರ ಕೇಂದ್ರ ಗ್ರಂಥಾಲಯ ಕಚೇರಿಗೆ ಹೆಸರು ಸಲ್ಲಿಸಲು ಸೂಚಿಸಲಾಗಿದೆ.
ಸ್ಫರ್ಧೆಯ ವಿವರ: ನವಂಬರ್ 17ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ “ನೈಸರ್ಗಿಕ ಪರಿಸರ” ಹಳ್ಳಿರೈತ ವ್ಯವಸ್ಥಾಯಕ್ಕೆ ಸಂಬಂಧಿಸಿದ ವಿಷಯದ ಕುರಿತು ಸ್ಥಳದಲ್ಲೆ ಚಿತ್ರ ಬರೆಯುವ ಸ್ಪರ್ಧೆವನ್ನು ಆಯೋಜಿಸಲಾಗಿದೆ.

ಅದೇ ದಿನ ಬೆಳಿಗ್ಗೆ 11.30 ರಿಂದ 12.30 ರವರೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ವಿದ್ಯಾರ್ಥಿ ಜೀವನದಲ್ಲಿ ಗ್ರಂಥಾಲಯ ಮತ್ತು ಪುಸ್ತಕಗಳ ಮಹತ್ವ” ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಬೆಳಿಗ್ಗೆ 11.30 ರಿಂದ 12.30 ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ “ಮದರ್  ತೆರೆಸಾ ಅವರ ಜೀವನ ಚರಿತ್ರೆಯ ಕುರಿತು  ಪ್ರಬಂಧ ಸ್ಪರ್ಧೆ ನಡೆಯಲಿದೆ.
ನ.19ರಂದು ಬೆಳಿಗ್ಗೆ 11 ರಿಂದ 12 ರವರೆಗೆ ಗ್ರಂಥಾಲಯದಲ್ಲಿ ಓದುವ ಎಲ್ಲಾ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ ನಡೆಯಲಿದೆ. ಎಲ್ಲ ಸ್ಪರ್ಧೆಗಳಿಗೂ 1 ಗಂಟೆ ಅವಧಿ ನಿಗಧಿಪಡಿಸಲಾಗಿದೆ. ಭಾಗವಹಿಸುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಸರು ನೊಂದಾಯಿಸಬೇಕು ಎಂದು ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now