Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ನೂತನ ಎಸ್.ಪಿ. ರಂಜಿತ್ ಕುಮಾರ್ ಬಂಡಾರು ಅಧಿಕಾರ ಸ್ವೀಕಾರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 18 : ಐಪಿಎಸ್ ಅಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಭಾನುವಾರ ನಿರ್ಗಮಿತ ಎಸ್‌.ಪಿ. ಧರ್ಮೇಂದ್ರ ಕುಮಾರ್ ಮೀನಾ ಅವರಿಂದ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಎಸ್.ಪಿ. ಧರ್ಮೇಂದರ್ ಕುಮಾರ್ ಮೀನಾ‌ ಅವರು,
ನವದೆಹಲಿಯ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (NTRO) ಪೇ ಮ್ಯಾಟ್ರಿಕ್ಸ್ ನ ಹಂತ-12 ರಲ್ಲಿ ವಿಜ್ಞಾನಿ ‘D’ ಆಗಿ ನೇಮಕವಾಗಿದ್ದಾರೆ. ಜುಲೈ 30 ರಂದು ಭಾರತ ಸರ್ಕಾರದ ಕೇಂದ್ರ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ ಸಂಜೀವ್ ಕುಮಾರ್ ಅವರು ವರ್ಗಾವಣೆ ಮಾಡಿ ಆದೇಶಿಸಿದ್ದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನೂತನ ಎಸ್.ಪಿ, ರಂಜಿತ್ ಕುಮಾರ್ ಬಂಡಾರು ‘ಜಿಲ್ಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಕೆಲಸ ಮಾಡಲಾಗುವುದು’ ಎಂದು ಹೇಳಿದರು.

ಈ ಮೊದಲು ಅವರು ಬಳ್ಳಾರಿ ಜಿಲ್ಲೆಯ ಎಸ್.ಪಿ ಆಗಿ,
ಆಂತರಿಕ ಭದ್ರತಾ ವಿಭಾಗ, ಭಯೋತ್ಪಾದನಾ ನಿಗ್ರಹ ದಳದ ಎಸ್ಪಿಯಾಗಿದ್ದ ರಂಜಿತ್‌ಕುಮಾರ್ ಬಂಡಾರು ಅವರು ಮಂಗಳೂರು ಸೇರಿದಂತೆ ವಿವಿಧೆಡೆ ಕಾರ್ಯ ನಿರ್ವಹಿಸಿದ್ದಾರೆ. ರಂಜಿತ್ ಕುಮಾರ್ ಅವರು 2017ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಕರ್ನಾಟಕ ಕೇಡರ ಅಧಿಕಾರಿಯಾಗಿದ್ದಾರೆ. ಇವರು ಮೂಲತಃ ಆಂಧ್ರಪ್ರದೇಶ ಮೂಲದವರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...