ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 19 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದೊಂದಿಗೆ ರಂಗಸೌರಭ ರಂಗೋತ್ಸವ -2024 ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ ಪ್ರಾಯೋಗಿಕ ತರಬೇತಿ ಕನ್ನಡ ಗೀತಗಾಯನ, ಯೋಗ ತರಬೇತಿ ಮತ್ತು ಕವಿಕಾವ್ಯ ಪರಿಚಯ ಕಾರ್ಯಕ್ರಮವನ್ನು ಕಾಮನಬಾವಿ ಬಡಾವಣೆಯಲ್ಲಿರುವ ಬಾಪೂಜಿ ವಿದ್ಯಾಸಂಸ್ಥೆಯ ಶ್ರೀಮತಿ ಹೇಮಾವತಿ ಕುವೆಂಪು ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 21 ರಂದು ಸೋಮವಾರ ಬೆಳಿಗ್ಗೆ 10-30 ಗಂಟೆಗೆ ಏರ್ಪಡಿಸಲಾಗಿದೆ.
ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಚಿತ್ರದುರ್ಗ ಸಹಾಯಕ ನಿರ್ದೇಶಕ ರವಿಚಂದ್ರ ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯ ಡಾ.ಜಿ.ದಾಸಯ್ಯ ಉಪನ್ಯಾಸಕರಾದ ಡಾ.ಪಿ.ರಾಧಮ್ಮ, ಡಾ.ಎಂ.ಎಸ್.ಲಕ್ಷ್ಮೀದೇವಿ, ಎಂ.ಉಷಾಕಿರಣ, ಟಿ.ತಿಪ್ಪೇರುದ್ರಯ್ಯ, ಬಿ.ಪಾತಲಿಂಗಪ್ಪ, ಬಿ.ಹೇಮಲತ, ನಾಟಕಕಾರ ಮೈಸೂರು ರಮಾನಂದ, ರಂಗನಟ ಅಮಿತಾನಂದ ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು.
ಯೋಗಥೆರಪಿ ತರಬೇತುದಾರ ಎಂ.ಬಿ.ಮುರುಳಿ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ತರಬೇತಿ ಸಂಪನ್ಮೂಲಗಳಾಗಿ ಭಾಗವಹಿಸುವರು.
ಕಂಡಕ್ಟರ್ ಗಂಗರಾಜು ವಿರಚಿತ ಮೈಸೂರು ರಮಾನಂದ ನಿರ್ದೇಶನದಲ್ಲಿ ಬೆಂಗಳೂರಿನ ಗೆಜ್ಜೆಹೆಜ್ಜೆ ರಂಗತಂಡದವರು ರಂಗಯ್ಯನ ರಾದ್ಧಾಂತ ಹಾಸ್ಯನಾಟಕ ಪ್ರದರ್ಶನ ನೀಡುವರು. ಪ್ರಶಿಕ್ಷಣಾರ್ಥಿಗಳಿಗೆ ಸರ್ಕಾರ ನಿಗಧಿಪಡಿಸಿದ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ, ಹುಯಿಲುಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ವಿರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ಧಯ್ಯ ಪುರಾಣಿಕ್ ಬರೆದ ಹೊತ್ತಿತೋ ಹೊತ್ತಿತೂ ಕನ್ನಡದ ದೀಪ, ಚನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡದ ಧ್ವನಿಮುದ್ರಿತ ಗೀತೆಗಳೊಂದಿಗೆ ಯೋಗ ತರಬೇತಿ ಹಾಗೂ ಸಾಹಿತ್ಯ ಕ್ಷೇತ್ರದ ವಿದ್ಯಾವಾರಿಧಿ ತ.ರಾ.ಸುಬ್ಬರಾವ್ ಇವರ ಕವಿಕಾವ್ಯ ಪರಿಚಯ ನೀಡಲಾಗುವುದು ಸಂಘದ ನಿರ್ದೇಶಕ ಪಿ.ಎನ್.ಗಿರೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.