ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಪಾಶ್ರ್ವನಾಥ ವಿದ್ಯಾಸಂಸ್ಥೆಯಿಂದ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಶನಿವಾರ ಮಕ್ಕಳಿಗೆ ಗಾಳಿಪಟ್ಟ ಹಬ್ಬವನ್ನು ಆಯೋಜಿಸಲಾಗಿತ್ತು. ತುಂತರು ಮಳೆಯ ನಡುವೆಯೇ ನಾಲ್ಕು ನೂರಕ್ಕೂ ಹೆಚ್ಚು ಮಕ್ಕಳು ಬಣ್ಣ ಬಣ್ಣದ ಗಾಳಿಪಟವನ್ನು ಹಾರಿಸುವ ಮೂಲಕ ಸಂಭ್ರಮಿಸಿದರು.
ಪಾಶ್ರ್ವನಾಥ ವಿದ್ಯಾಸಂಸ್ಥೆಯ ಸಹ ಕಾರ್ಯದರ್ಶಿ ಸುರೇಶ್ ಪಠಿಯಾತ್ ಗಾಳಿಪಟ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡುತ್ತ ಮಕ್ಕಳನ್ನು ಕೇವಲ ಪಠ್ಯಪುಸ್ತಕಕ್ಕೆ ಸೀಮಿತಗೊಳಿಸದೆ ಇಂತಹ ಹಬ್ಬಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸಿದಾಗ ಮಕ್ಕಳ ಮನಸ್ಸಿಗೆ ಖುಷಿ ಕೊಡುತ್ತದೆ. ಗ್ರಾಮೀಣ ಕಲೆಗಳು ನಶಿಸುತ್ತಿದ್ದು, ಉಳಿಸಿ ಬೆಳೆಸಬೇಕಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕಿ ನಾಜಿಮಾ ಸ್ವಾಲೇಹ, ಪ್ರೌಢಶಾಲಾ ಶಿಕ್ಷಕ ಜನಕರೆಡ್ಡಿ, ಕಲಾವಿದ ನಾಗರಾಜ್‍ಬೇದ್ರೆ ಹಾಗೂ ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










