ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಜನಸೇನಾ ಪಕ್ಷದ ಸಂಸ್ಥಾಪಕ, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಜನ್ಮ ದಿನವನ್ನು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಲು ಪಕ್ಷದ ರಾಜ್ಯ ಸಮಿತಿ ತೀರ್ಮಾನಿಸಿದೆ.
ಪಕ್ಷದ ರಾಜ್ಯ ಸಮಿತಿ ಸದಸ್ಯ, ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಸವರಾಜ್ (ಬಿ.ಟಿ.ರಾಜ್) ನೇತೃತ್ವದಲ್ಲಿ ಸೆ.2 ರಂದು ಆಡುಮಲ್ಲೇಶ್ವರ ಮೃಗಾಲಯದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾಣಿಗಳ ದತ್ತು ಸ್ವೀಕಾರ ಸಮಾರಂಭ ನಡೆಯಲಿದೆ. ಇದೇ ವೇಳೆ ಅರಣ್ಯ ಪಾಲಕರಿಗೆ ಜರ್ಕಿನ್ ವಿತರಿಸಲಾಗುತ್ತಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಜಿ.ಗೋಪ್ಯಾ ನಾಯ್ಕ್ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಆರ್.ವಸಂತ ಕುಮಾರ್, ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಐ.ಬಿ.ಅಕ್ಷತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮಾಧ್ಯಮ ಸಂಯೋಜಕ ಸಿ.ಅವಿನಾಶ್ ತಿಳಿಸಿದ್ದಾರೆ.










