Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ತೋಪುರಮಾಳಿಗೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.20 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಚಿತ್ರದುರ್ಗ ಯೋಜನಾ ಕಚೇರಿ ಕಸಬಾ ಬಿ.ವಲಯದಿಂದ ಕಲ್ಲಹಳ್ಳಿ ಕಾರ್ಯಕ್ಷೇತ್ರದ ಆರ್.ವಿ.ಪಬ್ಲಿಕ್ ಸ್ಕೂಲ್ ಮತ್ತು ಕಾಲೇಜು ತೋಪುರಮಾಳಿಗೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಸಾಮಾಜಿಕ ಅರಣ್ಯ ಇಲಾಖೆಯ ನವೀನ್ ಹಿರೆಗೌಡ ಗಿಡ ನೆಟ್ಟು ಮಾತನಾಡುತ್ತ ಪರಿಸರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅನೇಕ ಮಹತ್ವದ ಕೆಲಸಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಮಾನವನ ದುರಾಸೆಯಿಂದ ಗಿಡ-ಮರಗಳು ನಾಶವಾಗುತ್ತಿರುವುದಕ್ಕೆ ಪರಿಸರದಲ್ಲಿ ಅಸಮತೋಲನವಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ದೊಡ್ಡ ಮರವನ್ನಾಗಿ ಬೆಳೆಸಿ ಪರಿಸರಕ್ಕೆ ಹಸಿರು ಕೊಡುಗೆ ನೀಡಬಹುದೆಂದು ಹೇಳಿದರು.

ಆರ್.ವಿ. ಪಬ್ಲಿಕ್ ಸ್ಕೂಲ್ ಮತ್ತು ಕಾಲೇಜು ಕಾರ್ಯದರ್ಶಿ ವೀಣ, ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಜಿ.ಬಿ.ಪಾಪಣ್ಣ, ಅರಣ್ಯ ಇಲಾಖೆಯ ಓಬಣ್ಣ, ಒಕ್ಕೂಟದ ಉಪಾಧ್ಯಕ್ಷೆ ಸಿದ್ದಮ್ಮ, ಮುಖ್ಯ ಶಿಕ್ಷಕ ಕಿಶೋರ್‍ಕುಮಾರ್, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂಧು ಸ್ವಸಹಾಯ ತಂಡಗಳ ಸದಸ್ಯರು, ಕೃಷಿ ಮೇಲ್ವಿಚಾರಕ ಸುರೇಶ್
ಶಿಕ್ಷಕ ವೃಂದ ಹಾಗೂ ಮಕ್ಕಳು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...