Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜೆ.ಶಿವಪ್ರಸಾದ್ , ಉಪಾಧ್ಯಕ್ಷರಾಗಿ ಎಂ.ಎನ್.ಶರಣಪ್ಪ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಚಿತ್ರದುರ್ಗ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಎಲ್‍ಡಿ) ಬ್ಯಾಂಕ್‍ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಿ.ಜೆ.ಶಿವಪ್ರಸಾದ್, ಉಪಾಧ್ಯಕ್ಷರಾಗಿ ಎಂ.ಎನ್.ಶರಣಪ್ಪ ಅವಿರೋಧವಾಗಿ ಆಯ್ಕೆಯಾದರು

ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಪಿಳ್ಳೆಕರನಹಳ್ಳಿ ಶಿವಪ್ರಸಾದ್ ಅಧ್ಯಕ್ಷ ಸ್ಥಾನಕ್ಕೆ ಮತ್ತು ಎಂ.ಎನ್.ಶರಣಪ್ಪ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದೆ ಮಾಡಿದ್ದರು. ಆದರೆ ಯಾರು ಇವರ ವಿರುದ್ದ ನಾಮಪತ್ರ ಸಲ್ಲಿಸದ ಹಿನ್ನೆಲೆ ಅವಿರೋಧವಾಗಿ ಇಬ್ಬರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪ್ರಕಟಿಸಿದ್ದಾರೆ.

ನೂತನ ಅಧ್ಯಕ್ಷ ಪಿ.ಜೆ.ಶಿವಪ್ರಸಾದ್ ಮಾತನಾಡಿ ಸಂಸ್ಥೆಯಲ್ಲಿ ಸದಸ್ಯತ್ವ ಹೊಂದಿರುವ ತಾಲೂಕಿನ ರೈತರಿಗೆ ಪಿಎಲ್‍ಡಿ ಬ್ಯಾಂಕ್ ಮೂಲಕ ಸಿಗಬಹುದಾದ ಸರ್ಕಾರದ ವಿವಿಧ ಬಗೆಯ ಸಾಲ ಸವಲತ್ತು ತಲುಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ನಮ್ಮ ತಂದೆಯ ಕಾಲದಿಂದಲೂ ನಮಗೆ ಪಿಎಲ್ ಡಿ ಬ್ಯಾಂಕ್ ಜೊತೆ ಒಡನಾಟವಿದೆ. ನಮ್ಮ ತಂದೆ ಸಹ ಇಲ್ಲಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ನಾನು ಸಹ ಬ್ಯಾಂಕ್‍ನ ಕಾರ್ಯ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚು ಮಾಡುವ ಜೊತೆಗೆ, ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರ ಮತ್ತು ಹಿರಿಯ ಸಹಕಾರಿಗಳ ಸಲಹೆ ಮಾರ್ಗದರ್ಶನ ಪಡೆದು ಬ್ಯಾಂಕ್‍ನ ಅಭಿವೃದ್ಧಿಗೆ ಪೂರಕವಾಗಿ ಕ್ರಮವಹಿಸಲಾಗುವುದು ಎಂದರು.

ಸಂಸ್ಥೆಗೆ ನಾನು ಅಧ್ಯಕ್ಷನಾಗಲು ಕಾರಣಕರ್ತರಾದ ಎಲ್ಲಾ ಮತದಾರರಿಗೆ ಮತ್ತು ನಿರ್ದೇಶಕರಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲಾರಿಗೂ ಧನ್ಯವಾದಗಳು ತಿಳಿಸುತ್ತೇನೆ ಎಂದರು. ಅವಿರೋಧ ಆಯ್ಕೆಯಾಗುತ್ತಿದ್ದಂತೆ ಬ್ಯಾಂಕ್‍ನ ಮುಂಭಾಗದಲ್ಲಿ ಅಭಿಮಾನಿಗಳು, @ಚಿ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಜೆ.ಶಿವಪ್ರಕಾಶ್, ಕೆ.ಆರ್.ರವಿ, ಪಿ.ಎಸ್.ಜಗದೀಶ್, ಎನ್.ಎಸ್.ಮಾರುತಿ, ವನಜಾಕ್ಷಮ್ಮ, ಹೆಚ್.ಸಿ.ವಿಜಯಕುಮಾರ್, ಮಣ್ಣೆರು ನಾಗಪ್ಪ, ಕೆ.ಸಿ.ಮೌನೇಶ್, ಕೆ.ಎಸ್.ಸತೀಶ್, ಎನ್.ಆರ್.ಕೋಟ್ರೇಶ್, ಪದ್ಮ, ಕೆ.ಜೆ.ಸುನೀಲ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...