Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪೊಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ 

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 11 : ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೋ ನ್ಯಾಯಲಯ) 20 ವರ್ಷ ಕಠಿಣ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿದ್ದು, ಸಂತ್ರಸ್ತ ಬಾಲಕಿಗೆ ಸರ್ಕಾರದಿಂದ 4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.

ಚಳ್ಳಕೆರೆ ತಾಲ್ಲೂಕಿನ ಗಿರಿಯಮ್ಮನಹಳ್ಳಿ ಗ್ರಾಮದ ವಾಸಿ ಕಾರ್ತಿಕ್ (24 ವರ್ಷ) ಶಿಕ್ಷೆಗೊಳಗಾದ ಆರೋಪಿ. ಈತನ ವಿರುದ್ದ ತಳಕು ಪೋಲಿಸ್ ಠಾಣೆಯಲ್ಲಿ 2024 ರಲ್ಲಿ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ್ದು, ಈ ಬಗ್ಗೆ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿತ್ತು. ಪೋಲಿಸ್ ಇನ್ಸ್‌ಪೆಕ್ಟರ್‌ರವರಾದ ರಾಜಶೇಖರ್ ಇವರು ತನಿಖೆಯನ್ನು ಪೂರೈಸಿ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಪ್ರಕರಣದ ವಿಚಾರಣೆ ನಡೆಸಿದ ನಂತರ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್ ಅವರು ಈ ತೀರ್ಪು ನೀಡಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾದ (ಪೊಕ್ಸೋ) ಹೆಚ್.ಆರ್.ಜಗದೀಶ್ ಇವರು ವಾದ ಮಂಡಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...