ಸುದ್ದಿಒನ್, ಚಿತ್ರದುರ್ಗ, ಜನವರಿ.03 : ನಗರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಮಹೇಂದ್ರ (26 ವರ್ಷ) ಅನಾರೋಗ್ಯದಿಂದ ಇಂದು (ಬುಧವಾರ) ನಿಧನರಾದರು.
ಇವರು ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದವರು. ತಂದೆ ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂದು ವರ್ಗದವರನ್ನು ಅಗಲಿದ್ದಾರೆ. ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಲಾಖೆಯ ವತಿಯಿಂದ ಗೌರವ ವಂದನೆ ಸಲ್ಲಿಸಿದ ಬಳಿಕ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
2018 ರಲ್ಲಿ ಕೆಎಸ್ ಆರ್ ಪಿ ಯಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ 2022 ರಲ್ಲಿ ಸಿವಿಲ್ ಪೊಲೀಸ್ ಪೇದೆಯಾಗಿ ನೇಮಕವಾಗಿದ್ದರು. ಪ್ರಸ್ತುತ ಚಿತ್ರದುರ್ಗ ನಗರ ಪೊಲೀಸ್ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದರು.
ಮಹೇಂದ್ರ ಅವರ ಅಕಾಲಿಕ ಸಾವಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.