ಸುದ್ಚಿದಿಒನ್, ಚಿತ್ರದುರ್ಗ: ಚಿತ್ರಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಆನೆದಂತ, ಶ್ರೀಗಂಧ, ರಕ್ತಚಂದನವನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು ಮೂರು ಕೋಟಿ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರಿನ ತರೀಕೆರೆ ಮೂಲದ ಚಂದ್ರಶೇಖರ್, ತಮಿಳುನಾಡು ಮೂಲದ ಖಲೀಲ್ ಬಂಧಿತರಾಗಿದ್ದಾರೆ. ಈ ಆರೋಪಿಗಳು ಸೌದೆ ವ್ಯಾಪಾರ ಮಾಡುತ್ತೇವೆಂದು ಬಬ್ಬೂರು ಗ್ರಾಮದಲ್ಲಿ ವಾಸವಾಗಿದ್ದರು. ಆದರೆ ಮನೆಯಲ್ಲಿ ಅಕ್ರಮವಾಗಿ ಆನೆದಂತ, ಶ್ರೀಗಂಧ, ರಕ್ತಚಂದನವನ್ನು ಸಂಗ್ರಹ ಮಾಡಿದ್ದರು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಚಿತ್ರಹಳ್ಳಿ ಪೊಲೀಸರು ಆ ಮನೆ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು, ಮೂರು ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.