Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪೊಲೀಸರ ದಾಳಿ : ಅಕ್ರಮವಾಗಿ ಸಂಗ್ರಹಿಸಿದ್ದ ಆನೆದಂತ, ಶ್ರೀಗಂಧ ವಶಕ್ಕೆ.. ಅದರ ಬೆಲೆ ಎಷ್ಟು ಕೋಟಿ ಗೊತ್ತಾ..?

---Advertisement---

ಸುದ್ಚಿದಿಒನ್, ಚಿತ್ರದುರ್ಗ:  ಚಿತ್ರಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಆನೆದಂತ, ಶ್ರೀಗಂಧ, ರಕ್ತಚಂದನವನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು ಮೂರು ಕೋಟಿ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರಿನ ತರೀಕೆರೆ ಮೂಲದ ಚಂದ್ರಶೇಖರ್, ತಮಿಳುನಾಡು ಮೂಲದ ಖಲೀಲ್ ಬಂಧಿತರಾಗಿದ್ದಾರೆ. ಈ ಆರೋಪಿಗಳು ಸೌದೆ ವ್ಯಾಪಾರ ಮಾಡುತ್ತೇವೆಂದು ಬಬ್ಬೂರು ಗ್ರಾಮದಲ್ಲಿ ವಾಸವಾಗಿದ್ದರು. ಆದರೆ ಮನೆಯಲ್ಲಿ ಅಕ್ರಮವಾಗಿ ಆನೆದಂತ, ಶ್ರೀಗಂಧ, ರಕ್ತಚಂದನವನ್ನು ಸಂಗ್ರಹ ಮಾಡಿದ್ದರು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಚಿತ್ರಹಳ್ಳಿ ಪೊಲೀಸರು ಆ ಮನೆ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು, ಮೂರು ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment