ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಜಿಲ್ಲೆಯಾದ್ಯಂತ ಯುಗಾದಿ ಹಬ್ಬದ ಪ್ರಯುಕ್ತ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ಮಾರ್ಚ್ 29 ರಿಂದ 31 ರವರೆಗೆ ವಿಶೇಷ ದಾಳಿ ನಡೆಸಿ ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ.

ಚಿತ್ರದುರ್ಗ, ಚಳ್ಳಕೆರೆ ಮತ್ತು ಹಿರಿಯೂರು ಉಪವಿಭಾಗದ
ಟಒಟ್ಟು 108 ಪ್ರಕರಣಗಳನ್ನು ದಾಖಲು ಮಾಡಿ,
ಜೂಜಾಟ ಆಡುತ್ತಿದ್ದ 575 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದೆ. ಮತ್ತು ಅವರಿಂದ ಒಟ್ಟು 7,40,710/- ರೂಗಳನ್ನು
ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಎಸ್.ಪಿ. ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ.


