ಚಿತ್ರದುರ್ಗ. ಮೇ.21: ಚಿತ್ರದುರ್ಗ ನಗರ ಉಪವಿಭಾಗ ಘಟಕ-1 ವ್ಯಾಪ್ತಿಯಲ್ಲಿ ಬರುವ ಎಫ್-10 ಜಿಲ್ಲಾ ಪಂಚಾಯತ್ ಮಾರ್ಗದಲ್ಲಿ ಇರುವ 11 ಕೆ.ವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಈ ಮಾರ್ಗದ ಕೆಲವು ಪ್ರದೇಶಗಳಲ್ಲಿ ಮೇ 22ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-10 ಮಾರ್ಗದ ಐಯುಡಿಪಿ ಲೇಔಟ್-11ನೇ ಕ್ರಾಸ್, ಗಾಂಧಿ ನಗರ, ಕಂದಾಯಗಿರಿ ನಗರ, ರಾಜೇಂದ್ರ ನಗರ, ಸಾದಿಕ್ ನಗರ, ಸೂರ್ಯಪುತ್ರ ಸರ್ಕಲ್, ಕಣುಮಪ್ಪ ಬಡಾವಣೆ, ಜೋಗಿಮಟ್ಟಿ ರಸ್ತೆ-4,5,6ನೇ ಕ್ರಾಸ್, ಜೆ.ಪಿ.ನಗರ, ಸ್ವಾಮಿ ವಿವೇಕಾನಂದ ನಗರ, ಟೀಚರ್ಸ್ ಕಾಲೋನಿ, ಬುದ್ಧ ನಗರ ಸ್ಟೇಡಿಯಂ ಸುತ್ತಮುತ್ತ, ಪ್ರಶಾಂತ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.





















