Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಗರದಲ್ಲಿ ಮೇ 26ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಮೇ.25: ಚಿತ್ರದುರ್ಗ ನಗರದ ಪ್ರಮುಖ ಬಡಾವಣೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 26ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಚಂದ್ರವಳ್ಳಿ ಮಾರ್ಗದಲ್ಲಿ ಬರುವ ಧವಳಗಿರಿ ಬಡಾವಣೆ, ಚೌಡೇಶ್ವರಿ ಲೇಔಟ್, ಬುರುಜನಹಟ್ಟಿ, ಹೊಳಲ್ಕೆರೆ ರಸ್ತೆ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಲೈನ್‍ಗಳಿಗೆ ತಗಲುವ ಮರ ಗಿಡಗಳ ಕೊಂಬೆಗಳನ್ನು ಕತ್ತರಿಸಲು ಮತ್ತು ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ.
ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರು ವಿದ್ಯುತ್ ನಿಲುಗಡೆ ಸಮಯದಲ್ಲಿ ಸಹಕರಿಸಬೇಕು ಎಂದು ಬೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now