ಚಿತ್ರದುರ್ಗ | ಸೆಪ್ಟೆಂಬರ್ 29 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

0 Min Read

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಇದೇ ಸೆಪ್ಟೆಂಬರ್ 29 ರಂದು ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೂ ನಗರದ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಧವಳಗಿರಿ ಬಡಾವಣೆ, ಚೌಡೇಶ್ವರಿ ಲೇಔಟ್, ಬುರುಜನಹಟ್ಟಿ, ಹೊಳಲ್ಕೆರೆ ರಸ್ತೆ, ಕೆ.ಎಸ್.ಆರ್.ಟಿ.ಸಿ. ಬಸ್ಟಾಂಡ್, ಖಾಸಗಿ ಬಸ್ ನಿಲ್ದಾಣ, ಸಂತೆ ಹೊಂಡ, ಫಿಶ್ ಮಾರ್ಕೆಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಳೆ ವೈರ್ ಬದಲಾವಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ವಿದ್ಯುತ್ ನಿಲುಗಡೆಯ ಸಮಯದಲ್ಲಿ ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Share This Article
Enable Notifications OK No thanks