ಸುದ್ದಿಒನ್, ಚಿತ್ರದುರ್ಗ, ಜುಲೈ. 17 : 220/66/11 ಕೆ.ವಿ ಚಿತ್ರದುರ್ಗ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 2 ನೇ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ 220/66/11 ಕೆವಿ ಚಿತ್ರದುರ್ಗ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ನಾಳೆ (ಜುಲೈ. 18) ಬೆಳಿಗ್ಗೆ 10.00 ರಿಂದ ಸಂಜೆ 4:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.
ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು :
ಕಾಪರ್ ಮೈನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.



