ಚಿತ್ರದುರ್ಗ. ಡಿ.14: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್‍ಜೆವೈ ಮತ್ತು ಕೃಷಿ 11 ಕೆವಿ ಮಾರ್ಗಗಳಲ್ಲಿ ಇದೇ ಡಿಸೆಂಬರ್ 16ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು: ಕಾಪರ್ ಮೇನ್ಸ್, ಕ್ಯಾದಿಗೆರೆ, ಜೆಎನ್ ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ವಾಣಿಜ್ಯ, ಕಾರ್ಯ ಮತ್ತು ಪಾಲನ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















