ಚಿತ್ರದುರ್ಗ. ಮೇ.19: ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಚಿತ್ರದುರ್ಗ ನಗರದ ಬಸವೇಶ್ವರ ನಗರ, ಕನಕ ನಗರ, ಮಲ್ಲಾಪುರ, ಮೆದೇಹಳ್ಳಿ ಮಲ್ಲನಕಟ್ಟೆ, ಅಶ್ವತ್ ರೆಡ್ಡಿ ಬಡಾವಣೆ, ಶಿವಚಾರ್ಯ ಬಡಾವಣೆ, ಕೋಡೆನಹಟ್ಟಿ, ತಮಟಕಲ್ಲು, ಗ್ರಾಮಾಂತರ ಪೊಲೀಸ್ ಠಾಣೆ, ಪಿ.ಕೆ.ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರು ವಿದ್ಯುತ್ ನಿಲುಗಡೆ ಸಮಯದಲ್ಲಿ ಸಹಕರಿಸಬೇಕು ಎಂದು ಬೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










