ಚಿತ್ರದುರ್ಗ.ಮೇ.26: ನಗರದ ಪ್ರಮುಖ ಬಡಾವಣೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಮೇ 27ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಐ.ಯು.ಡಿ.ಪಿ ಲೇಔಟ್, ಸರಸ್ವತಿ ಪುರಂ, ಸರ್ಕಾರಿ ಡಿಪ್ಲೋಮೋ ಕಾಲೇಜು, ಕೋಟೆ ರಸ್ತೆ, ಕಾಮನಬಾವ ಬಡಾವಣೆ, ಜೋಗಿಮಟ್ಟಿ ರಸ್ತೆ, ಕರುವಿನಕಟ್ಟೆ ವೃತ್ತ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಪಂಚಾಯಿತಿ, ವಿಜ್ಞಾನ ಕಾಲೇಜು, ಕಲಾ ಕಾಲೇಜು, ಎಲ್.ಐ.ಸಿ ಕಚೇರಿ, ತಾಲ್ಲೂಕು ಪಂಚಾಯಿತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ವಿದ್ಯುತ್ ನಿಲುಗಡೆ ಸಮಯದಲ್ಲಿ ಸಹಕರಿಸಬೇಕು ಎಂದು ಬೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















