Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪ್ರಕೃತಿ ಆಯುರ್ವೇದ ಮೆಡಿಕಲ್ ಕಾಲೇಜಿಗೆ ಉತ್ತಮ ಫಲಿತಾಂಶ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 30 : ನಗರದ ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (Devaraj Urs Education Society) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಕೃತಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಥಮ ವರ್ಷದ BAMS ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ.

ಈ ಬಾರಿ ಕಾಲೇಜು ಒಟ್ಟು 80% ಫಲಿತಾಂಶ ಸಾಧಿಸಿದ್ದು, ಒಟ್ಟು ವಿದ್ಯಾರ್ಥಿಗಳಲ್ಲಿ 16 ಡಿಸ್ಟಿಂಕ್ಷನ್ ಹಾಗೂ 24 ಫಸ್ಟ್ ಕ್ಲಾಸ್ ಗಳಿಸಿದ್ದಾರೆ. ಡಿಸ್ಟಿಂಕ್ಷನ್ ಮತ್ತು ಫಸ್ಟ್ ಕ್ಲಾಸ್ ಪಡೆದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಇದೇ ಸಾಧನೆಯನ್ನು ಮತ್ತಷ್ಟು ಹೆಮ್ಮೆಯನ್ನಾಗಿಸುವಂತೆ, ವಿದ್ಯಾರ್ಥಿಗಳಲ್ಲಿ ಸಿಮ್ರಾನ್ ಬೇಗಂ 80.41%, ಯಶವಂತ್ ಎ ಎನ್ 80.00% ಹಾಗೂ ಶ್ರುಂಗ ಬಿ ಎಸ್ 79.05% ಅಂಕಗಳನ್ನು ಪಡೆದು ಕಾಲೇಜಿನ ಟಾಪ್ ಸಾಧಕರಾಗಿ ಹೊರಹೊಮ್ಮಿದ್ದಾರೆ.

ವಿದ್ಯಾರ್ಥಿಗಳ ಈ ಈ ಮಹತ್ತರ ಸಾಧನೆಗೆ ಸಂಸ್ಥೆಯ ಗೌರವಾನ್ವಿತ ಕಾರ್ಯದರ್ಶಿ ಡಾ. ಎಂ. ಚಂದ್ರಪ್ಪ, ಆಡಳಿತಾಧಿಕಾರಿ ಶ್ರೀಮತಿ ಚಂದ್ರಕಲಾ, ಸಿಇಒ ಎಂ. ಸಿ. ರಘುಚಂದನ್ ಹಾಗೂ ಪ್ರಿನ್ಸಿಪಾಲ್ ಅವರ ಮಾರ್ಗದರ್ಶನ ಮತ್ತು ಬೆಂಬಲ ಪ್ರಮುಖ ಕಾರಣವಾಗಿದ್ದು, ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರ ಪರಿಶ್ರಮ, ಸಮರ್ಪಣೆ ಮತ್ತು ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.
ಕಾಲೇಜು ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now