Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿಲ್ಲಾ ರೆಡ್ಡಿ ಜನಸಂಘದಿಂದ ಅ.25ರಂದು ಪ್ರತಿಭಾ ಪುರಸ್ಕಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ಜಿಲ್ಲಾ ರೆಡ್ಡಿ ಜನಸಂಘದ ವತಿಯಿಂದ ಇದೇ ಅಕ್ಟೋಬರ್ 25ರಂದು ಭಾನುವಾರ ಮಧ್ಯಾಹ್ನ 12ಕ್ಕೆ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಲ್ಲದೆ, 01-11-2025 ರಿಂದ 30-09-2026ರ ಅವಧಿಯಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾದ ಸಮುದಾಯದ ಅಧಿಕಾರಿಗಳು ಹಾಗೂ ನೌಕರರನ್ನು ಈ ಸಂದರ್ಭದಲ್ಲಿ ಗೌರವಿಸಿ ಅಭಿನಂದಿಸಲಾಗುವುದು.

ಸಮಾರಂಭದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಸಮುದಾಯದ ಮುಖಂಡರು, ವಿದ್ಯಾರ್ಥಿಗಳ ಪೋಷಕರು ಮತ್ತು ನಿವೃತ್ತ ನೌಕರರ ಕುಟುಂಬದವರು ಪಾಲ್ಗೊಳ್ಳಲಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನಸಂಘದ ಅಧ್ಯಕ್ಷ ಜಿ.ಹೆಚ್. ತಿಪ್ಪಾರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now