Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ವೇಶ್ಯಾವಾಟಿಕೆ ದಂಧೆ, ಮೂವರ ಬಂಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್. 23 : ನಗರದ ಜಯಲಕ್ಷ್ಮೀ ಬಡಾವಣೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತವಾದ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೋಟೆ ಪೊಲೀಸರು ಭಾನುವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಬೀನಾಭಾನು, ಅನ್ನುಬಾಷಾ ಮತ್ತು ತಿಪ್ಪೇಸ್ವಾಮಿ ಬಂಧಿತರು. ಇವರು ಜಯಲಕ್ಷ್ಮೀ ಬಡಾವಣೆಯ ವೀರಭದ್ರಸ್ವಾಮಿ ರಸ್ತೆಯಲ್ಲಿನ ಮುಜಾಫರ್ ಎಂಬುವವರ ಬಾಡಿಗೆ ಮನೆಯಲ್ಲಿ ಅಮಾಯಕ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಭಾನುವಾರ ಸಂಜೆ 5.30 ರ ವೇಳೆಗೆ ಎಸ್.ಪಿ. ರಂಜಿತ್‌ಕುಮಾರ್ ಬಂಡಾರು, ಎ.ಎಸ್.ಪಿ. ಎಸ್.ಜೆ ಕುಮಾರಸ್ವಾಮಿ ನೇತೃತ್ವದಲ್ಲಿ ಡಿ.ವೈ.ಎಸ್.ಪಿ. ದಿನಕರ್ ಪಿ.ಕೆ, ಸಿ.ಇ.ಎನ್. ಠಾಣೆಯ ಡಿ.ವೈ.ಎಸ್.ಪಿ ಉಮೇಶ್‌ ಈಶ್ವರ್‌ನಾಯ್ಕ್ ಡಿ.ವೈ.ಎಸ್.ಪಿ, ಇವರ ಮಾರ್ಗದರ್ಶನದಲ್ಲಿ, ಕೋಟೆ ಠಾಣೆಯ ಪಿ.ಐ. ಪ್ರಕಾಶ ಗೌಡ ಪಾಟೀಲ್, ಪಿಎಸ್‌ಐ
ಬಿ.ರುಕ್ಕಮ್ಮ ಮತ್ತು ಸಿಬ್ಬಂದಿಯವರ ತಂಡ ಭಾನುವಾರ ಸಂಜೆ 5.30 ರ ವೇಳೆಗೆ ಜಯಲಕ್ಷ್ಮೀ ಬಡಾವಣೆಯಲ್ಲಿರುವ ಮುಜಾಫರ್ ಎಂಬುವವರ ಬಾಡಿಗೆ ಮನೆಯಲ್ಲಿ ದಾಳಿ ನಡೆಸಿ ಅಮಾಯಕ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಬೀನಾಭಾನು, ಅನ್ನುಬಾಷಾ ಮತ್ತು ತಿಪ್ಪೇಸ್ವಾಮಿ ಇವರನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಅನ್ನುಬಾಷರವರಿಗೆ ಸೇರಿದ ಒಂದು ಕಾರು ಮತ್ತು 03 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದು. ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟೆ ಪೊಲೀಸ್ ಠಾಣೆಯ ಅಧಿಕಾರಿಗಳು ವೇಶ್ಯಾವಾಟಿಕೆಯ ಬಗ್ಗೆ ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಹಿನ್ನೆಲೆಯಲ್ಲಿ ಎಸ್.ಪಿ. ರಂಜಿತ್‌ ಕುಮಾರ್ ಬಂಡಾರು ಅವರು ಶ್ಲಾಘಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...