Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಮತದಿಂದ ಶೀಘ್ರವೇ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವುದು ಸೇರಿದಂತೆ ಹದಿನೈದು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ಕೃಷಿ ಪಂಪ್‍ಸೆಟ್‍ಗಳಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ಕೈಬಿಡಬೇಕು. ಬೋರ್‍ವೆಲ್ ಕೊರೆಸಲು ಸರ್ಕಾರ ಬೆಲೆ ನಿಗಧಿಪಡಿಸಿ ಅಧಿಕಾರಿಗಳು, ಬೋರ್‍ವೆಲ್ ಮಾಲೀಕರು ಹಾಗೂ ರೈತರನ್ನೊಳಗೊಂಡ ಸಮಿತಿ ರಚಿಸಬೇಕು. ಬ್ಯಾಂಕ್‍ಗಳು ಒತ್ತಾಯಪೂರ್ವಕವಾಗಿ ಕೃಷಿ ಸಾಲ ವಸೂಲಿ ಮಾಡುವುದನ್ನು ನಿಲ್ಲಿಸಿ ಎನ್.ಓ.ಸಿ.ಗೆ ಶುಲ್ಕ ಸಂಗ್ರಹಿಸಬಾರದೆಂದು ಪ್ರತಿಭಟನಾನಿರತ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಸಾಲ ನೀಡುವಾಗ ರೈತರನ್ನು ಸಿಬಿಲ್‍ನಿಂದ ಹೊರತುಪಡಿಸಬೇಕು. ಮೈಕ್ರೋ ಫೈನಾನ್ಸ್ ಕಂಪನಿಗಳ ಹಣಕಾಸು ವ್ಯವಹಾರದ ಮೇಲೆ ಸರ್ಕಾರಗಳು ನಿಯಂತ್ರಣ ವಹಿಸಿ ರೈತರ ಜಮೀನುಗಳ ದಾರಿ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಬೇಕು. ಪಹಣಿ ಮತ್ತು ಭೂದಾಖಲೆಗಳನ್ನು ಐದು ರೂ.ಗೆ ನೀಡಬೇಕು. ಇದನ್ನು ವ್ಯಾಪಾರವಾಗಿ ಪರಿಗಣಿಸದೆ ಸೇವೆಯಾಗಿ ಸಲ್ಲಿಸಬೇಕು. ಭೂದಾಖಲೆಗಳನ್ನು ಗಣಕೀಕೃತಗೊಳಿಸುವಾಗ ತಪ್ಪುಗಳಾದಲ್ಲಿ ಸಂಬಂಧಪಟ್ಟ ನೌಕರರನ್ನೆ ಹೊಣೆಗಾರರನ್ನಾಗಿಸಬೇಕು. ಬಗರ್‍ಹುಕಂ ಸಾಗುವಳಿದಾರರ ಅರ್ಜಿಗಳನ್ನು ಪರಿಶೀಲಿಸಿ ಸಾಗುವಳಿ ಚೀಟಿ ವಿತರಿಸಬೇಕು. ತೆಂಗಿಗೆ ಬಾಧಿಸುತ್ತಿರುವ ಕಪ್ಪುಹುಳು ಬಾಧೆಯನ್ನು ಹತೋಟಿಗೆ ತರಬೇಕು. ಕಾಲಮಿತಿಯಲ್ಲಿ ಬೆಳೆ ವಿಮೆ ನೀಡಿ ಬೆಳೆ ಪರಿಹಾರ ತಾರತಮ್ಯವನ್ನು ನಿವಾರಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಪ್ರಧಾನ ಕಾರ್ಯದರ್ಶಿ ಆರ್.ಬಿ.ನಿಜಲಿಂಗಪ್ಪ, ರೈತ ಮುಖಂಡರುಗಳಾದ ಮರ್ಲಹಳ್ಳಿ ರವಿಕುಮಾರ್, ಜಿ.ಇ.ರಾಜಪ್ಪ, ರಂಗಪ್ಪ, ಬಸಪ್ಪ, ಜಿ.ತಿಪ್ಪೇಸ್ವಾಮಿ, ಪರಸಪ್ಪ, ನಿರಂಜನಮೂರ್ತಿ, ನಾಗರಾಜಪ್ಪ, ನರಸಿಂಹಪ್ಪ, ತಿಮ್ಮಾರೆಡ್ಡಿ, ಎಸ್.ಜಿ.ನಿಜಲಿಂಗಪ್ಪ

ಓಂಕಾರಪ್ಪ, ಹರಳಯ್ಯ, ಮಂಜುನಾಥ, ಬಿ.ಎಸ್.ರಂಗಸ್ವಾಮಿ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...