Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅಪಘಾತಗಳನ್ನು ತಡೆಗಟ್ಟುವಂತೆ ಪಪ್ಪಿ ಸ್ಟೂಡೆಂಟ್ ವಿಂಗ್‍ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 24 : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಮಂಗಳವಾರ ಬಿ.ಕಾಂ.ವಿದ್ಯಾರ್ಥಿ ಚೇತನ್  ಅಪಘಾತಕ್ಕಿಡಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಈ ಘಟನೆ ಹಿನ್ನೆಲೆಯಲ್ಲಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಪಪ್ಪಿಸ್ ಸ್ಟೂಡೆಂಟ್ ವಿಂಗ್ ವತಿಯಿಂದ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಡಿವೈಎಸ್ಪಿ ಕಚೇರಿ, ಬಡಾವಣೆ ಪೊಲೀಸ್ ಠಾಣೆಗೆ ಪಪ್ಪಿಸ್ ಸ್ಟೂಡೆಂಟ್ ವಿಂಗ್‍ನ ವಿದ್ಯಾರ್ಥಿಗಳು ಭೇಟಿ ನೀಡಿ ಹೆದ್ದಾರಿಗಳಲ್ಲಿ ದಟ್ಟಣೆಯ ವಾಹನಗಳು ಸಂಚರಿಸುವ ರಸ್ತೆಗಳಲ್ಲಿ ಬ್ಯಾರಿಕೇಟ್ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ನಗರ ಪ್ರದೇಶ ಹಾಗೂ ಹೊರವಲಯದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಇವುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಚಾರಿ ಪೊಲೀಸ್ ಇಲಾಖೆಯು ಶಾಲಾ-ಕಾಲೇಜು ಮಟ್ಟಗಳಲ್ಲಿ ಕಾರ್ಯಗಾರವನ್ನು ಮಾಡಿ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಪಪ್ಪಿಸ್ ಸ್ಟೂಡೆಂಟ್ ವಿಂಗ್‍ನ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ರವೀಂದ್ರ, ಚಿನ್ನು, ಸಲೀಂ, ಜಾಫರ್ ಖಾನ್, ಅಭಾರ್ಹರ್, ಉದಯ್, ಪ್ರಜ್ವಲ್, ಸುದೀಪ್, ಸ್ವಾಮಿ, ಸುಮಂತ್,ಇತ್ತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...