Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆಯಲ್ಲಿ ಆರ್.ಅಶೋಕ್ ಭಾಗಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ಯುದ್ದಕ್ಕೆ ಇಳಿದಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು. ಕೇಂದ್ರದಲ್ಲಿ ಮೂರನೆ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರಮೋದಿರವರ ಕೈಬಲಪಡಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿವಿಧ ಮಂಡಲಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಕರೆ ನೀಡಿದರು.

ದಾವಣಗೆರೆ ರಸ್ತೆಯಲ್ಲಿರುವ ಜಗಳೂರು ಮಹಲಿಂಗಪ್ಪ ಕಂಫರ್ಟ್ಸ್ ನಲ್ಲಿ ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಧುಗಿರಿ ಜಿಲ್ಲೆಗಳ ವಿವಿಧ ಮಂಡಲ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಶುಕ್ರವಾರ ನಡೆದ ಬಿಜೆಪಿ. ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಾಥಮಿಕ ಸದಸ್ಯತ್ವದ ಗುರಿ ಎಷ್ಟು, ಎಷ್ಟು ಸದಸ್ಯತ್ವವಾಗಿದೆ. ಗುರಿ ತಲುಪಲು ಏಕೆ ಸಾಧ್ಯವಾಗಿಲ್ಲ. ಉಳಿದಿರುವ ಇನ್ನು ಹದಿನಾಲ್ಕು ದಿನಗಳಲ್ಲಿ ಎಷ್ಟು ಸದಸ್ಯತ್ವ ಮಾಡಬಹುದು ಎನ್ನುವುದರ ಬಗ್ಗೆ ಚರ್ಚಿಸಿದ ಆರ್.ಅಶೋಕ್ ಗಣೇಶ್ ಹಬ್ಬ ಮುಗಿಯಿತು. ಈಗ ನವರಾತ್ರಿ ಬಂದಿದೆ. ಮನೆಯಲ್ಲಿ ವಯಸ್ಸಾದವರು ಸತ್ತಿದ್ದಾರೆ. ತಾಲ್ಲೂಕು ಅಧ್ಯಕ್ಷ, ಜಿಲ್ಲಾ ಪದಾಧಿಕಾರಿಗಳು ಸರಿಯಿಲ್ಲ ಎನ್ನುವ ಯಾವ ಕಾರಣವನ್ನು ಹೇಳುವಂತಿಲ್ಲ. ಭಾರತೀಯ ಜನತಾಪಕ್ಷವನ್ನು ಪ್ರಜಾಪ್ರಭುತ್ವ ಪಕ್ಷವನ್ನಾಗಿಸಬೇಕಾಗಿರುವುದರಿಂದ ನಿಮಗೆ ನೀಡಿರುವ ಗುರಿ ತಲುಪಬೇಕೆಂದು ಸೂಚಿಸಿದರು.

ಬಿಜೆಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‍ರೆಡ್ಡಿ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ವಿಧಾನಪರಿಷತ್ ಸದಸ್ಯರುಗಳಾದ ಕೆ.ಎಸ್.ನವೀನ್, ಚಿದಾನಂದಗೌಡ, ಧನಂಜಯ

ಸರ್ಜಿ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಶ್ರೀಮತಿ ಗಾಯತ್ರಿ ಸಿದ್ದೇಶ್ವರ್, ಮಧುಗಿರಿ ಜಿಲ್ಲಾ ಬಿಜೆಪಿ.ಅಧ್ಯಕ್ಷ ಹನುಮಂತೆಗೌಡ, ಕೆ.ಟಿ.ಕುಮಾರಸ್ವಾಮಿ ಇನ್ನು ಅನೇಕರು ವೇದಿಕೆಯಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...