ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ನಗರದ ಬನಶಂಕರಿ ಲೇಔಟ್ (ಹೌಸಿಂಗ್ ಬೋರ್ಡ್ ಕಾಲೋನಿ – ರುಡ್ ಸೆಟ್ ಎದುರು) ನಿವಾಸಿ ಹಾಗೂ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ನ ವ್ಯವಸ್ಥಾಪಕ ರವೀಂದ್ರನಾಥ ಠಾಗೋರ್ (59 ವರ್ಷ) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಇಂದು ಸಂಜೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ : ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಹಾಗೂ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ಎಸ್.ಆರ್. ಲಕ್ಷ್ಮೀಕಾಂತ ರೆಡ್ಡಿಯವರು ಸಂತಾಪ ಸೂಚಿಸಿದ್ದಾರೆ. ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರು, ಸಹೋದ್ಯೋಗಿಗಳು ಹಾಗೂ ಸಿಬ್ಬಂದಿ ವರ್ಗದವರು ಮೃತರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.







