ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 18 : ನಗರದ ವಿದ್ಯಾನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ನಗರ ಮತ್ತು ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಇಂದು ಸಂಜೆ ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಬಂಧಿತರನ್ನು ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ
ವಿದ್ಯಾ ನಗರದ 5 ನೇ ಕ್ರಾಸ್‌ನಲ್ಲಿರುವ ತಿಮ್ಮಮ್ಮ ರವರ ಮನೆಯಲ್ಲಿ ಬಾಡಿಗೆಗೆ ವಾಸವಿರುವ ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂಬುವರು ಅಮಾಯಕ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತವಾದ ಮಾಹಿತಿ ಮೇರೆಗೆ ಈ ದಾಳಿ ಮಾಡಿದ್ದಾರೆ.
ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ನಗರ ಮತ್ತು ಮಹಿಳಾ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ವೇಶ್ಯಾವಾಟಿಕೆಯ ಬಗ್ಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ ಕಾರ್ಯವನ್ನು ಚಿತ್ರದುರ್ಗ ಜಿಲ್ಲೆಯ ಎಸ್.ಪಿ ರಂಜಿತ್‌ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









