Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಿದ್ಯಾನಗರದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ; ಇಬ್ಬರ ಬಂಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 18 : ನಗರದ ವಿದ್ಯಾನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ನಗರ ಮತ್ತು ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಇಂದು ಸಂಜೆ ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಬಂಧಿತರನ್ನು ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ
ವಿದ್ಯಾ ನಗರದ 5 ನೇ ಕ್ರಾಸ್‌ನಲ್ಲಿರುವ ತಿಮ್ಮಮ್ಮ ರವರ ಮನೆಯಲ್ಲಿ ಬಾಡಿಗೆಗೆ ವಾಸವಿರುವ ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂಬುವರು ಅಮಾಯಕ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತವಾದ ಮಾಹಿತಿ ಮೇರೆಗೆ ಈ ದಾಳಿ ಮಾಡಿದ್ದಾರೆ.

ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ನಗರ ಮತ್ತು ಮಹಿಳಾ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ವೇಶ್ಯಾವಾಟಿಕೆಯ ಬಗ್ಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ ಕಾರ್ಯವನ್ನು ಚಿತ್ರದುರ್ಗ ಜಿಲ್ಲೆಯ ಎಸ್.ಪಿ ರಂಜಿತ್‌ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...