Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಬಾಗೂರಿನಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

 

ಚಿತ್ರದುರ್ಗ,( ಸೆಪ್ಟೆಂಬರ್01) : ಜಿಲ್ಲೆಯಲ್ಲಿ ಆಗಸ್ಟ್ 31ರಂದು ಸುರಿದ ಮಳೆ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಬಾಗೂರಿನಲ್ಲಿ 35 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಹೊಸದುರ್ಗ ಪಟ್ಟಣದಲ್ಲಿ 18.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 12.6 ಮಿ.ಮೀ, ರಾಮಗಿರಿಯಲ್ಲಿ 26.2 ಮಿ.ಮೀ, ತಾಳ್ಯ 6.2 ಮಿ.ಮೀ ಮಳೆಯಾಗಿದೆ. ಹಿರಿಯೂರು ನಗರದಲ್ಲಿ 0.8 ಮಿ.ಮೀ ಮಳೆಯಾಗಿದೆ.

ಬುಧವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 22 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 03 ಮನೆಗಳು, ಹಿರಿಯೂರು 07, ಹೊಸದುರ್ಗ 06, ಹೊಳಲ್ಕೆರೆ ತಾಲ್ಲೂಕಿನಲ್ಲಿ 06 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ. ಕೃಷಿ ಬೆಳೆಗೆ ಸಂಬಂಧಿಸಿದಂತೆ 30 ಹೆಕ್ಟೇರ್ ಪ್ರದೇಶ ಹಾನಿಗೊಳಗಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ ಒಂದು ಜಾನುವಾರು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ಒಂದು ಜಾನುವಾರು ಸೇರಿದಂತೆ ಒಟ್ಟು ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!