ಚಿತ್ರದುರ್ಗ | ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ರಾಜೇಶ್‍ ಆಯ್ಕೆ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 30 : ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಶ್ರೀ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ.ಜಿ. ರಾಜೇಶ್‍ರವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷರಾದ ಡಾ.ಎನ್.ಹರೀಶ್ ತಿಳಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಶನಿವಾರ ಸಂಜೆ ಬಾಲಕರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಜ್ಯ ಅಧ್ಯಕ್ಷರಾದ ಡಾ.ಎನ್.ಹರೀಶ್ ನೇತೃತ್ವದಲ್ಲಿ ಸಭೆಯನ್ನು ನಡೆಸಿದ ಜಿಲ್ಲೆಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರು ಜಿಲ್ಲಾ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಗೌರವಾಧ್ಯಕ್ಷರಾಗಿ ಜಿ.ಎಸ್. ತಿಪ್ಪೇಸ್ವಾಮಿ, ಕಾರ್ಯಧ್ಯಕ್ಷರಾಗಿ ಬಿ.ಆರ್.ತಿಪ್ಪಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಡಾ.ತಿಮ್ಮಣ್ಣ, ಕಾರ್ಯ ದರ್ಶಿಯಾಗಿ ಜಗದೀಶ್, ಸಂಘಟನಾ ಕಾರ್ಯದರ್ಶಿಯಾಗಿ ಯೋಗೀಶ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಅಧ್ಯಕ್ಷರಾದ ಡಾ.ಎನ್.ಹರೀಶ್ ಸಂಘವು ತನ್ನ ನೌಕರರ ಕ್ಷೇಮಾಭೀವೃದ್ದಿಯನ್ನು ನೋಡುವುದರ ಮೂಲಕ ಪಿ.ಯು,ಡಿಡಿಯವರೊಂದಿಗೆ ಸಹಕಾರದೊಂದಿಗೆ ಉತ್ತಮವಾದ ಭಾಂದವ್ಯವನ್ನು ಹೊಂದಿ ನಿಮ್ಮ ಸಮಸ್ಯೆಗಳ ಬಗ್ಗೆ ಗಮನ ನೀಡಿ ಅದರ ಪರಿಹಾರಕ್ಕೆ ಪ್ರಯತ್ನ ಮಾಡಿ ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ನೌಕರರು ಭಾಗವಹಿಸಿದ್ದರು.

Share This Article