Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪ್ರೊ.ಡಿ.ಟಿ.ರಂಗಸ್ವಾಮಿ ಅವರಿಗೆ  ರಾಜ್ಯೋತ್ಸವ ಪ್ರಶಸ್ತಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.31) : 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ 66 ಸಾಧಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 2021ರ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಜಿಲ್ಲೆಯ ಪ್ರೊ.ಡಿ.ಟಿ.ರಂಗಸ್ವಾಮಿಯವರು ಭಾಜನರಾಗಿದ್ದಾರೆ.

ಸಾಹಿತ್ಯರತ್ನ ಪ್ರೊ ಡಿ.ಟಿ.ರಂಗಸ್ವಾಮಿಯವರು 09-06-19230 ರಂದು ಹೊರಕೆರದೇವರಪುರದಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ತನ್ನ ಸ್ವಗ್ರಾಮದಲ್ಲಿಯೇ ಪೂರೈಸಿ ಪ್ರೌಢಶಿಕ್ಷಣವನ್ನು ಸರ್ಕಾರಿ ಪ್ರೌಢಶಾಲೆ ಚಿತ್ರದುರ್ಗ ಮಹಾರಾಜ ಕಾಲೇಜು ಮೈಸೂರಿನಲ್ಲಿ ಎಂ.ಎ. ಪದವಿಯನ್ನು ಪಡೆದರು.

ಸಾಹಿತ್ಯಾಸಕ್ತರಾದ ಪ್ರೊ ಡಿ.ಟಿ.ರಂಗಸ್ವಾಮಿ 1955 ರಿಂದ ಉಪನ್ಯಾಸಕ ವೃತ್ತಿಯನ್ನು ಆರಂಭಿಸಿ ರೀಡರ್, ಪ್ರೊಫೆಸರ್, ಪ್ರಾಂಶುಪಾಲರಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಯವರಿಗೆ ಆಡಳಿತ ಕನ್ನಡ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡದಲ್ಲಿ ಸುಮಾರು 50 ಗ್ರಂಥಗಳನ್ನು ರಚಿಸಿ ಕನ್ನಡ ಸಾಹಿತ್ಯಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ.

ಹುಟ್ಟೂರಿನಲ್ಲಿ ಆರೋಗ್ಯ ಕೇಂದ್ರ, ಉಚಿತ ಕಲ್ಯಾಣ ಮಂಟಪ ನಿರ್ಮಿಸಿ ಸಾಮಾಜಿಕ ಕಾರ್ಯಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

1942 ರ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ್ದರು. ಇವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಇಡೀ ಜಿಲ್ಲೆಗೆ ಖುಷಿ ತಂದುಕೊಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

error: Content is protected !!