Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಮಹೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ಬುರುಜನಹಟ್ಟಿ ರಸ್ತೆ ಕೋಣನಹಟ್ಟಿಯಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ರಾಮನವಮಿಯ ಮರುದಿನ ಶನಿವಾರ ಆಂಜನೇಯಸ್ವಾಮಿಗೆ 35 ನೇ ವರ್ಷದ ಪೂಜಾ ಮಹೋತ್ಸವದ ಪ್ರಯುಕ್ತ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.

ಬಗೆ ಬಗೆಯ ಹೂವು, ಹಾರ ಹಾಗೂ ಬೆಳ್ಳಿಯ ಆಭರಣಗಳಿಂದ ಆಂಜನೇಯಸ್ವಾಮಿಯನ್ನು ಸಿಂಗರಿಸಿ ಮಹಿಳೆಯರು ಗಂಗೆಯನ್ನು ಹೊತ್ತು ತಂದ ನಂತರ ಶ್ರದ್ದಾಭಕ್ತಿಯಿಂದ ಪೂಜಿಸಲಾಯಿತು.
ಮಹಾ ಮಂಗಳಾರತಿ ನಂತರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಹಸ್ರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಡಿ.ಬಿ.ನರಸಿಂಹಪ್ಪ, ಜಯಣ್ಣ, ಡಿ.ಬಿ.ಗೋವಿಂದಪ್ಪ, ಆರ್.ಸತ್ಯಣ್ಣ, ವೇದಣ್ಣ, ಶ್ರೀನಿವಾಸ್, ಯೋಗೇಶ್‍ಕುಮಾರ್, ಚಂದ್ರಶೇಖರ್, ರಮೇಶ್, ಕೃಷ್ಣಮೂರ್ತಿ, ಶ್ರೀಧರ್ ಎಲ್.ರಮೇಶ್, ರಂಗನಾಥ್, ಅಂಬರೀಶ್ ಹಾಗೂ ಭಕ್ತ ಮಂಡಳಿಯವರು ಪೂಜೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...