Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸೆ. 17 ರಂದು ಚಿದಂಬರರಾವ್ ಜಂಬೆ ಅವರಿಗೆ ರಂಗಪುಷ್ಪ ನಮನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 13 : ನಗರದ ರಂಗಸೌರಭ ಕಲಾ ಸಂಘ (ರಿ.) ಚಿತ್ರದುರ್ಗ ಹಾಗೂ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಮತ್ತು ರಂಗಸಾಹಿತ್ಯ ಗೆಳೆಯರ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಗಾರೇಹಟ್ಟಿಯಲ್ಲಿರುವ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದಿ: 17-09-2026 ರಂದು ಬೆಳಿಗ್ಗೆ 10-30ಕ್ಕೆ ಕನ್ನಡ ರಂಗಭೂಮಿಗೆ ಹೊಸ ಆಯಾಮ, ರಂಗಶಿಕ್ಷಣಕ್ಕೆ ಶಿಸ್ತು ಮತ್ತು ಪ್ರಯೋಗಶೀಲತೆಗೆ ಹೊಸ ದಿಕ್ಕು ನೀಡಿದ ಹಿರಿಯ ರಂಗನಿರ್ದೇಶಕ, ರಂಗಚಿಂತಕ, ರಂಗಸಾಹಿತಿ ಚಿದಂಬರರಾವ್ ಜಂಬೆ ಇವರು ದಿ: 12-09-2026ನೇ ಶನಿವಾರ ಮಧ್ಯಾಹ್ನ ನಿಧನ ಹೊಂದಿದ ಪ್ರಯುಕ್ತ ರಂಗಪುಷ್ಪ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಎಸ್.ಜೆ.ಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಡಾ.ಕೆ.ಎಂ.ವೀರೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಾಚಾರ್ಯ ಪಿ.ಎಂ.ಜಿ ರಾಜೇಶ್ ಅಧ್ಯಕ್ಷತೆ ವಹಿಸುವರು. ರಂಗ ವಿಮರ್ಶಕ ಡಾ.ವಿ.ಬಸವರಾಜ್ ಇವರು ಚಿದಂಬರರಾವ್ ಜಂಬೆಯವರ ರಂಗಬದುಕು ಕುರಿತು ಉಪನ್ಯಾಸ ನೀಡಲಿದ್ದಾರೆ. ರಂಗಸೌರಭ ಕಲಾ ಸಂಘದ ಅಧ್ಯಕ್ಷ ಡಾ.ಕೆ. ಮೋಹನ್‍ಕುಮಾರ್, ರಂಗ ನಿರ್ದೇಶಕ ಹಾಗೂ ನೀನಾಸಂ ಪದವೀಧರ ಕೆ.ಪಿ.ಎಂ.ಗಣೇಶಯ್ಯ ನುಡಿನಮನ ಸಲ್ಲಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಬಾದರದಿನ್ನಿ ಆಟ್ರ್ಸ್ ಅಕಾಡೆಮಿಯ ಪ್ರಕಾಶ್ ಬಾದರದಿನ್ನಿ, ಯುವ ಪ್ರಶಸ್ತಿ ಪುರಸ್ಕøತ ಶ್ರೀನಿವಾಸ್ ಮಳಲಿ, ಯೋಗಥೆರಪಿ ಚಿಕಿತ್ಸಕ ಎಂ.ಬಿ.ಮುರುಳಿ ಮುಂತಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಸಂಘದ ನಿರ್ದೇಶಕ ಪಿ.ಎನ್.ಗಿರೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now