ಸುದ್ದಿಒನ್, ಚಿತ್ರದುರ್ಗ, (ಮೇ.29): ನಗರದ ಜೆಸಿಆರ್ ಬಡಾವಣೆಯ ನಿವಾಸಿ ಹೆಸರಾಂತ ವೈದ್ಯ ಡಾ. ನಿಸಾರ್ ಅಹಮದ್(81) ಇಂದು ಸಂಜೆ 5 ಗಂಟೆ ಸುಮಾರಿಗೆ ಅನಾರೋಗ್ಯದ ಕಾರಣ ನಿಧನರಾದರು.
ಅವರಿಗೆ ಪತ್ನಿ, ಓರ್ವ ಗಂಡು, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಮೇ.30) ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಖಬರಸ್ಥಾನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸರ್ಕಾರಿ ವೈದ್ಯರಾಗಿ ನಿವೃತ್ತಿ ಹೊಂದಿದ ನಂತರ ಜೆಸಿಆರ್ ಬಡಾವಣೆಯಲ್ಲಿ ವೈದ್ಯ ವೃತ್ತಿಯನ್ನು ಮುಂದುವರೆಸಿದ್ದರು. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ಗಣ್ಯರು, ಅಪಾರ ಸಂಖ್ಯೆಯ ಜನರು ಆಗಮಿಸಿ ಅವರ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದಿದ್ದಾರೆ.