Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣ: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆ ತಡೆಯಲು ದರ್ಶನ್‌ ಪರ ಕೊನೆಯ ಪ್ರಯತ್ನ ವಿಫಲ?

---Advertisement---

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ರಾವ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಟ ದರ್ಶನ್‌ ಪರ ವಕೀಲರು ಸಲ್ಲಿಸಿದ್ದ ಮುಂದೂಡಿಕೆ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ ಸೆಪ್ಟೆಂಬರ್‌ 28ರಂದು ಪ್ರದೋಷ್‌ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಿಗದಿಯಂತೆ ನಡೆಯಲಿದೆ. 

ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್‌ ಪರವಾಗಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಈಗಾಗಲೇ ವಜಾಗೊಳಿಸಿದೆ. ಸೆಪ್ಟೆಂಬರ್‌ 23ರಂದು ಹೈಕೋರ್ಟ್‌ ಆದೇಶದ ಬಳಿಕ ವಿಚಾರಣಾ ನ್ಯಾಯಾಲಯವು ಸೆಪ್ಟೆಂಬರ್‌ 28ರಂದು ಹೇಳಿಕೆ ದಾಖಲಿಸಲು ಸಮನ್ಸ್‌ ಜಾರಿ ಮಾಡಿತ್ತು. ಇದಾದ ಬಳಿಕ ದರ್ಶನ್‌ ಪರ ವಕೀಲರು ಸೆಪ್ಟೆಂಬರ್‌ 26ರಂದು ಮತ್ತೆ ನ್ಯಾಯಾಲಯದ ಮೊರೆ ಹೋಗಿ, ಹೈಕೋರ್ಟ್‌ ಆದೇಶದ ಪ್ರತಿ ತಡವಾಗಿ ದೊರೆತಿದ್ದು, ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಮಯ ಬೇಕಿದೆ.

ಹೀಗಾಗಿ ಸೆ.28ರಂದು ನಿಗದಿಯಾಗಿರುವ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಒಂದು ವಾರ ಮುಂದೂಡಬೇಕು ಎಂದು ಮನವಿ ಮಾಡಿದರು.ಆದರೆ, ಈ ಮನವಿಗೆ ಪ್ರಾಸಿಕ್ಯೂಷನ್‌ ಆಕ್ಷೇಪ ವ್ಯಕ್ತಪಡಿಸಿತು. ಈಗಾಗಲೇ ಸೆಪ್ಟೆಂಬರ್‌ 24ರಂದು ಪ್ರದೋಷ್‌ಗೆ ಸಮನ್ಸ್‌ ಜಾರಿಯಾಗಿದ್ದು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದ ಬಳಿಕವೇ ಈ ಪ್ರಕ್ರಿಯೆ ಮುಂದುವರಿಸಲಾಗಿದೆ. ಹೊಸದಾಗಿ ಪರಿಗಣಿಸಬೇಕಾದ ಯಾವುದೇ ಅಂಶಗಳಿಲ್ಲ ಎಂದು ಸರ್ಕಾರಿ ಅಭಿಯೋಜಕರು ವಾದಿಸಿದರು. ನ್ಯಾಯಾಲಯ ಈ ವಾದವನ್ನು ಪರಿಗಣಿಸಿ ಮುಂದೂಡಿಕೆ ಮನವಿಯನ್ನು ತಿರಸ್ಕರಿಸಿದೆ.

ಹೈಕೋರ್ಟ್‌ ಕೂಡ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸುವ ವೇಳೆ, ದರ್ಶನ್‌ ಪರ ವಕೀಲರಿಗೆ ಮಾಫಿ ಸಾಕ್ಷಿಯ ಹೇಳಿಕೆಯನ್ನು ಕ್ರಾಸ್‌ ಎಕ್ಸಾಮಿನೇಷನ್‌ ಮೂಲಕ ಪ್ರಶ್ನಿಸುವ ಅವಕಾಶವಿದೆ ಎಂದು ಸ್ಪಷ್ಟಪಡಿಸಿತ್ತು. ಪ್ರದೋಷ್‌ ನೀಡುವ ಹೇಳಿಕೆಯ ಅಂಶಗಳನ್ನು ಪ್ರಶ್ನಿಸುವ ಹಾಗೂ ಅವರ ಸಾಕ್ಷ್ಯದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ ಹಕ್ಕು ಆರೋಪಿಗಳ ಪರ ವಕೀಲರಿಗೆ ಇದೆ ಎಂದು ನ್ಯಾಯಾಲಯ ತಿಳಿಸಿತ್ತು. ಹೀಗಾಗಿ ಇದೀಗ ಸೆಪ್ಟೆಂಬರ್‌ 28ರಂದು ಪ್ರದೋಷ್‌ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗಲಿದ್ದು, ನಂತರದ ಹಂತದಲ್ಲಿ ದರ್ಶನ್‌ ಪರ ವಕೀಲರಿಗೆ ಕ್ರಾಸ್‌ ಎಕ್ಸಾಮಿನೇಷನ್‌ ಮೂಲಕ ಅವರ ಹೇಳಿಕೆಯನ್ನು ಪ್ರಶ್ನಿಸುವ ಅವಕಾಶ ಇರಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now