Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿಗೆ ಮಗು ಜನನ : ವೈದ್ಯ ಮಲ್ಲಿಕಾರ್ಜುನ ಕೀರ್ತಿ ಹೇಳಿದ್ದೇನು ?

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 16 : ದರ್ಶನ್ ಗ್ಯಾಂಗ್ ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಬುಧವಾರ ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗುವಿನ ಆರೋಗ್ಯದ ಬಗ್ಗೆ ಕೀರ್ತಿ ಆಸ್ಪತ್ರೆಯ ವೈದ್ಯ ಡಾ.ಮಲ್ಲಿಕಾರ್ಜುನ ಕೀರ್ತಿ ಮಾಹಿತಿ ನೀಡಿದ್ದು, ಹಲವು ಅಂಶಗಳನ್ನು ತೆರೆದಿಟ್ಟಿದ್ದಾರೆ.

ಮಂಗಳವಾರ ರಾತ್ರಿ ಸಹನಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದ ಬುಧವಾರ ಬೆಳಿಗ್ಗೆ 6.55 ಕ್ಕೆ ಸಹಜ ಹೆರಿಗೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದಾರೆ. ಅವಧಿ ಪೂರ್ವ ಅಂದರೆ 36 ವಾರಕ್ಕೆ ಹೆರಿಗೆಯಾದ ಕಾರಣ ಮಗುವಿನ ತೂಕ 2 ಕೆಜಿ 175 ಗ್ರಾಂ ಇದೆ. ಮಗು ಹುಟ್ಟಿದ ತಕ್ಷಣ ಅತ್ತಿದ್ದು, ಆರೋಗ್ಯವಾಗಿದೆ’ ಎಂದಿದ್ದಾರೆ.

‘ಸಹನಾ ಅವರು ನಮ್ಮ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸುತ್ತಿದ್ದರು. ಗರ್ಭ ಚೀಲ ಸಮಸ್ಯೆಯಿದ್ದ ಕಾರಣ ಪ್ರಾರಂಭದಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಆದರೆ ಎಲ್ಲರಿಗೂ ತಿಳಿದಂತೆ ನಡೆದ ಘಟನೆಯಿಂದ ಅವರು ಮಾನಸಿಕವಾಗಿ ಕುಗ್ಗಿದ್ದರು. ಆ ವೇಳೆ ಪೌಷ್ಟಿಕಾಂಶದ ಕೊರತೆ ಎದುರಾದ ಕಾರಣ ತಾಯಿ, ಮಗುವಿನ ತೂಕ ಕಡಿಮೆಯಾಗಿತ್ತು.‌ ಸಕಲ ರೀತಿಯ ಮುಂಜಾಗ್ರತೆ ಹಾಗೂ ಚಿಕಿತ್ಸೆ ನೀಡಿದ್ದರಿಂದ ಸಹಜ ಹೆರಿಗೆಯಾಗಿದೆ. ಇನ್ನೂ ನಾಲ್ಕೈದು ದಿನ ಆಸ್ಪತ್ರೆಯಲ್ಲಿ ನೋಡಿಕೊಂಡು ಬಳಿಕ ಮನೆಗೆ ಕಳುಹಿಸಲಾಗುತ್ತದೆ’ ಎಂದು ವೈದ್ಯರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...