ಚಿತ್ರದುರ್ಗ : ಜಿಲ್ಲೆಯ ಮಳೆ, ಬೆಳೆ ಹಾಗೂ ಮನೆಗಳಿಗೆ ಹಾನಿಯಾದ ವರದಿ

1 Min Read

 

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮೇ.30) : ಮೇ. 29 ರಂದು ಸುರಿದ ಮಳೆಯ ವಿವರದನ್ವಯ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 20 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.6 ಮಿ.ಮೀ ಮತ್ತೋಡು 2.1 ಮಿ.ಮೀ, ಬಾಗೂರು 3 ಮಿ.ಮೀ, ಶ್ರೀರಾಂಪುರ  3.2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1 ರಲ್ಲಿ 1.8 ಮಿ.ಮೀ, ಚಿತ್ರದುರ್ಗ -2 ರಲ್ಲಿ 7.6 ಮಿ.ಮೀ, ಭರಮಸಾಗರ 4.3 ಮಿ.ಮೀ, ಸಿರಿಗೆರೆ 9.2 ಮಿ.ಮೀ, ತುರುವನೂರು 17.6ಮಿ.ಮೀ, ಐನಹಳ್ಳಿ 12.8 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿ ರಾಯಾಪುರ 4.1 ಮಿ.ಮೀ, ರಾಂಪುರ 11.1 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ
ಚಳ್ಳಕೆರೆಯಲ್ಲಿ 4 ಮಿ.ಮೀ, ನಾಯಕನಹಟ್ಟಿ 9.2 ಮಿ.ಮೀ, ತಳುಕು 4.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನಲ್ಲಿ 2.2 ಮಿ.ಮೀ, ತಾಳ್ಯದಲ್ಲಿ 3.2ಮಿ.ಮೀ ಮಳೆಯಾಗಿದೆ.

22 ಮನೆಗಳು ಭಾಗಶಃ ಹಾನಿ: ಸೋಮವಾರ ಸುರಿದ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 22 ಮನೆಗಳು ಭಾಗಶಃ ಹಾನಿಯಾಗಿದ್ದು, ಒಟ್ಟು 14.5 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 3 ಮನೆ ಭಾಗಶಃ ಹಾನಿಯಾಗಿದ್ದು, 10 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು,

ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ 17 ಮನೆ ಭಾಗಶಃ ಹಾನಿಯಾಗಿದ್ದು, 4.5 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *