Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ನಿವೃತ್ತ ಡಿಹೆಚ್‍ಓ ಡಾ.ಹೆಚ್.ಹೆಚ್.ನಾಯ್ಕ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 21 : ನಿವೃತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಹೆಚ್.ನಾಯ್ಕ (88 ವರ್ಷ) ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಒರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪತ್ನಿ ಪುಟ್ಟು ಬಾಯಿ ನಾಯ್ಕ ಅವರು ಒಮ್ಮೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರೆ, ಪುತ್ರ ಸುನಿಲ್ ಚಿತ್ರದುರ್ಗ ನಗರಸಭೆಯ ಅದ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಇಬ್ಬರೂ ಪುತ್ರಿಯರು ಅಮೇರಿಕಾದಲ್ಲಿ ವೈದ್ಯರಾಗಿ ಸೇವೆಸಲ್ಲಿಸುತ್ತಿದ್ದು, ಅಲ್ಲಿಯೇ ನೆಲೆಸಿದ್ದಾರೆ. ಮಾ.24ರ ಸೋಮವಾರ ಮದ್ಯಾಹ್ನ ಹುಟ್ಟೂರು ಸಿರಿಗೆರೆ ಬಳಿಯ ದೊಡ್ಡಿಗನಾಳ್ ಹೊಸಹಟ್ಟಿಯಲ್ಲಿ ಮದ್ಯಾಹ್ನ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಚಿತ್ರದುರ್ಗದ ಪಿಎನ್‍ಟಿ ಕ್ವಾಟರ್ಸ್ ಬಳಿಯಲ್ಲಿರುವ ನಿವಾಸದ ಬಳಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಮೇರಿಕಾದಲ್ಲಿ ನೆಲೆಸಿರುವ ಅವರ ಪುತ್ರಿಯರು ಮತ್ತು ಇತರೆ ಸದಸ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment