ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ನ. 23 : 60 ವರ್ಷಕ್ಕೆ ಮೇಲ್ಪಟ್ಟು 70 ವರ್ಷದೊಳಗಿನ ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಸಂಧ್ಯಾ ಕಿರಣ” ನಗದು ರಹಿತ ಆರೋಗ್ಯ ಭಾಗ್ಯ ಯೋಜನೆಯನ್ನು ಸರ್ಕಾರ ಜಾರಿ ಮಾಡಿದ್ದನ್ನು ಸ್ವಾಗತಿಸಿ ಹಿರಿಯೂರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ(ರಿ.), ಚಿತ್ರದುರ್ಗ ಶಾಖೆಯ ಜಿಲ್ಲಾಧ್ಯಕ್ಷರಾದ ಬಿ.ಪಿ.ಪ್ರೇಮನಾಥ್ ಸನ್ಮಾನಿಸಿದ್ದಾರೆ.
ರಾಜ್ಯ ಸರ್ಕಾರ ಜಾರಿ ಮಾಡಿರುವ ಸಂಧ್ಯಾ ಕಿರಣ” ಯೋಜನೆಯಿಂದ ಹಲವಾರು ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಅನುಕೂಲವಾಗಿದೆ. ಪ್ರತಿ ಕುಟುಂಬಕ್ಕೆ ವಾರ್ಷಿಕ ರೂ.5.00ಲಕ್ಷಗಳವರೆಗೆ ವಂತಿಕೆ ಆಧಾರಿತ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಎಬಿ-ಎಆರ್ಕೆ) ಯೋಜನೆಯಡಿಯಲ್ಲಿನ ನೀತಿಯನ್ವಯ “ಸಂಧ್ಯಾ ಕಿರಣ” ನಗದು ರಹಿತ ಆರೋಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಉತ್ತಮವಾಗಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ(ರಿ.), ಚಿತ್ರದುರ್ಗ ಶಾಖೆಯ ಪದಾಧಿಕಾರಿಗಳು ಹಾಜರಿದ್ದರು.










