ಚಿತ್ರದುರ್ಗ: ನಗರದ ಭೀಮಪ್ಪನಾಯಕ ರಸ್ತೆಯ ನಿವಾಸಿ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ತಿಮ್ಮಾರೆಡ್ಡಿ ಕೆ.ಟಿ. ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಮೃತರಿಗೆ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಮಿತ್ರರು ಹಾಗೂ ಶಿಷ್ಯವೃಂದವಿದ್ದು, ಅಗಲಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಿತೈಷಿಗಳು ಪ್ರಾರ್ಥಿಸಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.








