ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ನಗರದ ಜೆಸಿಆರ್ ಬಡಾವಣೆ ನಿವಾಸಿ ಹಾಗೂ ನಿವೃತ್ತ ಶಿಕ್ಷಕ ಪಿ. ತಿಪ್ಪೇಶಾಚಾರ್ಯ (85 ವರ್ಷ) ಅವರು ಇಂದು ಬೆಳಿಗ್ಗೆ ಸುಮಾರು 11:50 ರ ವೇಳೆಗೆ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಚಿತ್ರದುರ್ಗ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ನಿಧನದ ನಂತರ ಕಣ್ಣುಗಳನ್ನು ನಗರದ ಬಸವೇಶ್ವರ ಆಸ್ಪತ್ರೆಯ ಶ್ರೀ ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಾಳೆ (ಫೆಬ್ರವರಿ. 08, ಭಾನುವಾರ) ಬೆಳಿಗ್ಗೆ 11 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಂತಾಪ : ಮೃತರ ನಿಧನಕ್ಕೆ ಚಿತ್ರದುರ್ಗ ಜಿಲ್ಲಾ ವಿಶ್ವಕರ್ಮ ಸಮಾಜ, ನಿವೃತ್ತ ನೌಕರರ ಸಂಘ ಸೇರಿದಂತೆ ಜೆಸಿಆರ್ ಬಡಾವಣೆಯ ನಾಗರೀಕರು ಸಂತಾಪ ಸೂಚಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.





